ಕರ್ನಾಟಕ ಕಾಂಗ್ರೆಸ್ ಬಿಕ್ಕಟ್ಟು: ರಾಹುಲ್ ಗಾಂಧಿಗೆ ವರದಿ ಸಾಧ್ಯತೆ

ನವದೆಹಲಿ, ಸೆಪ್ಟೆಂಬರ್ 15: ಕರ್ನಾಟಕದಲ್ಲಿ ಉದ್ಭವಿಸಿರುವ ಮೈತ್ರಿ ಸರ್ಕಾರದಲ್ಲಿನ ಆಂತರಿಕ ಬಿಕ್ಕಟ್ಟಿನ ಕುರಿತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಶನಿವಾರ ವರದಿ ನೀಡುವ ನಿರೀಕ್ಷೆ ಇದೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ದೆಹಲಿ ನಿವಾಸದಲ್ಲಿ ಶನಿವಾರ ನಡೆಯಲಿರುವ ಮುಂಬರುವ ಲೋಕಸಭೆ ಚುನಾವಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ವೇಣುಗೋಪಾಲ್ ಪಾಲ್ಗೊಳ್ಳಲಿದ್ದು, ಕರ್ನಾಟಕದಲ್ಲಿನ ಭಿನ್ನಮತ ಕುರಿತಂತೆ ವರದಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಕಾಂಗ್ರೆ.ಸ್ ನ ಪರವಾಗಿ ವೇಣುಗೋಪಾಲ್ ಸಭೆಯಲ್ಲಿ ಭಾಗವಹಿಸಲಿದ್ದು ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಗೈರು ಹಾಜರಾಗಲಿದ್ದಾರೆ, ಮಹಾರಾಷ್ಟ್ರ ಉಸ್ತುವಾರಿಯಾಗಲಿರುವ ಖರ್ಗೆ ಶನಿವಾರ ಪೂರ್ವ ನಿಗದಿ ಕಾರ್ಯಕ್ರಮದಂತೆ ಮುಂಬೈನ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Venugopal to report Rahul on Karnataka political affairs

ಈ ಹಿನ್ನೆಲೆಯಲ್ಲಿ ದೆಹಲಿಯ ರಾಹುಲ್ ಗಾಂಧಿ ನಿವಾಸದಲ್ಲಿ ನಡೆಯುವ ಸಭೆಯಲ್ಲಿ ಖರ್ಗೆ ಪಾಲ್ಗೊಳ್ಳುತ್ತಿಲ್ಲ,ಹೀಗಾಗಿ ಕರ್ನಾಟಕದಲ್ಲಿ ಜಾರಕಿಹೊಳಿ ಸಹೋದರರು, ಬಳ್ಳಾರಿ ಶಾಸಕರು ಸೇರಿದಂತೆ ಹಲವಾರು ಶಾಸಕರು ಬಂಡೆದ್ದಿರುವ ಕುರಿತಂತೆ ವರದಿ ನೀಡಲಿರುವ ವೇಣುಗೋಪಾಲ್ ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಮತ್ತಿತರೆ ವಿಷಯಗಳ ಕುರಿತಂತೆ ಪಕ್ಷದ ಹೈಕಮಾಂಡ್ ನಿಂದ ಹಸಿರು ನಿಶಾನೆ ಪಡೆಯುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+