ಚುನಾವಣೆಗಳಲ್ಲಿ ಕಾಂಗ್ರೆಸ್ ಸಾಧನೆ ನಿರಾಶದಾಯಕವಾಗಿದೆ: ಸೋನಿಯಾ ಗಾಂಧಿ
ನವದೆಹಲಿ, ಮೇ 07: ಐದು ಚುನಾವಣೆಗಳಲ್ಲಿ ಕಾಂಗ್ರೆಸ್ ಮಾಡಿರುವ ಸಾಧನೆ ನಿರಾಶದಾಯಕವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಪಕ್ಷದ ಎಲ್ಲಾ ಸಂಸದರೊಂದಿಗೆ ಮಾತುಕತೆ ನಡೆಸಿರುವುವ ಸೋನಿಯಾ ಗಾಂಧಿ ಚುನಾವಣೆಯಲ್ಲಿನ ಹಿನ್ನಡೆಯಿಂದ ಪಕ್ಷದ ಸದಸ್ಯರು ನಮ್ರತೆ ಮತ್ತು ಪ್ರಮಾಣಿಕ ಮನೋಭಾವದಿಂದ ಪಾಠ ಕಲಿಯಬೇಕು ಎಂದರು.
ಇದೇ ಸಂದರ್ಭದಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಚುನಾವಣೆಯಲ್ಲಿ ಜಯಗಳಿಸಿರುವ ಮಮತಾ ಬ್ಯಾನರ್ಜಿ, ಎಂಕೆ ಸ್ಟಾಲಿನ್ ಹಾಗೂ ಎಡಪಕ್ಷಗಳ ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.

ವಿಧಾನಸಭೆ ಚುನಾವಣೆಯ ಫಲಿತಾಂಶ ಪರಾಮರ್ಶೆಗೆ ಶೀಘ್ರದಲ್ಲೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸೇರಿಲಿದೆ ಎಂದು ಮಾಹತಿ ನೀಡಿದರು.ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ ಶೂನ್ಯ ಫಲಿತಾಂಶ ಕಂಡಿದೆ, ಇನ್ನು ಬಿಜೆಪಿ ಕೇರಳದಲ್ಲಿ ಶೂನ್ಯ ಫಲಿತಾಂಶ ದಾಖಲಿಸಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇ 5 ರಂದು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.












Click it and Unblock the Notifications