• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇಂದ್ರದ ಮಾಜಿ ಸಚಿವ ರಘುವಂಶ ಪ್ರಸಾದ್ ಸಿಂಗ್ ನಿಧನ

|

ನವದೆಹಲಿ, ಸೆ. 13: ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ರಘುವಂಶ ಪ್ರಸಾದ್ ಸಿಂಗ್ ಅವರು ದೆಹಲಿ ಏಮ್ಸ್ ನಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಆರ್ ಜೆ ಡಿ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ಕಳೆದ ಜೂನ್ ತಿಂಗಳಿನಲ್ಲೇ ರಾಜೀನಾಮೆ ಸಲ್ಲಿಸಿದ್ದರು. ಕೊರೊನಾವೈರಸ್ ಸೋಂಕಿನಿಂದ ಬಳಲುತ್ತಿರುವ ರಘುವಂಶ್ ಅವರನ್ನು ಪಾಟ್ನಾದಿಂದ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ಸೇರಿಸಲಾಗಿತ್ತು. ಬುಧವಾರದಂದು ಐಸಿಯುಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

75 ವರ್ಷ ವಯಸ್ಸಿನ ರಘುವಂಶ್ ಪ್ರಸಾದ್ ಅವರು ತೇಜಸ್ವಿ ಯಾದವ್ ರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಒಪ್ಪಲು ಸಾಧ್ಯವಿಲ್ಲ ಎಂದು ಬಹಿರಂಗವಾಗಿ ಪ್ರತಿಭಟಿಸಿದ್ದರು.

ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್ ಜೆ ಡಿ ಪರ ಪ್ರಭಾವ ಬೀರಬಲ್ಲ ಮುಖಂಡ ಎನಿಸಿಕೊಂಡಿದ್ದ ರಘುವಂಶ್ ಅವರ ಅನುಪಸ್ಥಿತಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಲಿದೆ.

ವೈಶಾಲಿ ಕ್ಷೇತ್ರದ ಸಂಸದ, ಯುಪಿಎ 1ರಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ರಘುವಂಶ್ ಅವರು ನರೇಗಾ (National Rural Guarantee Employment) ಕಾಯ್ದೆ ಸಮರ್ಥವಾಗಿ ಜಾರಿಗೊಳಿಸಿದ್ದರು.

ರಘುವಂಶ್ ಪ್ರಸಾದ್ ಅವರ ನಿಧನಕ್ಕೆ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಆರ್ ಜೆ ಡಿ ತೇಜಸ್ವಿ ಯಾದವ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

English summary
Veteran Bihar politician and ex-RJD leader Raghuvansh Prasad Singh died Sunday morning at AIIMS in Delhi, where he had been placed on a ventilator and was being treated for post-Covid complications. He was 74 years old.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X