ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡುರಿಗೆ ಕೊವಿಡ್-19 ನೆಗೆಟಿವ್

ನವದೆಹಲಿ, ಅಕ್ಟೋಬರ್.12: ಕೊರೊನಾವೈರಸ್ ಸೋಂಕು ತಪಾಸಣೆ ನಡೆಸಿದ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಸದ್ಯ ಅವರನ್ನು ಹೋಮ್ ಕ್ವಾರೆಂಟೇನ್ ನಲ್ಲಿ ಇರಿಸಲಾಗಿದೆ ಎಂದು ಉಪರಾಷ್ಟ್ರಪತಿ ಕಾರ್ಯದರ್ಶಿ ತಿಳಿಸಿದ್ದಾರೆ.

ಸೋಮವಾರ ಏಮ್ಸ್ ಆಸ್ಪತ್ರೆಯ ತಜ್ಞವೈದ್ಯರ ತಂಡವು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಿದರು. ಈ ವೇಳೆ ವೈದ್ಯಕೀಯ ವರದಿಯಲ್ಲಿ ಕೊರೊನಾವೈರಸ್ ಸೋಂಕು ನೆಗೆಟಿವ್ ಎಂದು ಗೊತ್ತಾಗಿದೆ.

ವೆಂಕಯ್ಯ ನಾಯ್ಡುರನ್ನು ಪ್ರಸ್ತುತ ಹೋಮ್ ಕ್ವಾರೆಂಟೇನ್ ನಲ್ಲಿ ಇರಿಸಲಾಗಿದೆ. ಅವರ ಆರೋಗ್ಯದಲ್ಲಿ ಮೊದಲಿಗಿಂತ ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಸದ್ಯದರಲ್ಲೇ ಅವರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಉಪರಾಷ್ಟ್ರಪತಿಗಳ ಕಾರ್ಯದರ್ಶಿಗಳು ಸ್ಪಷ್ಟನೆ ನೀಡಿದ್ದಾರೆ.

Vice President Venkaiah Naidu Tested Negative For COVID19

ಸಪ್ಟೆಂಬರ್.29ರಂದು ಕೊವಿಡ್-19 ದೃಢ:

ಕಳೆದ ಸಪ್ಟೆಂಬರ್.29ರ ಮಂಗಳವಾರ ಎಂದಿನಂತೆ ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಗಾದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರಿಗೆ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಆದರೆ ಅವರಲ್ಲಿ ಯಾವುದೇ ಸೋಂಕಿತ ಲಕ್ಷಣಗಳು ಕಂಡು ಬಂದಿರಲಿಲ್ಲ. ವೆಂಕಯ್ಯ ನಾಯ್ಡು ಅವರ ಪತ್ನಿ ಉಷಾ ಅವರಿಗೆ ಕೊರೊನಾ ವೈರಸ್ ನೆಗೆಟಿವ್ ಎಂದು ವರದಿ ಬಂದಿದ್ದು, ಅವರು ಮನೆಯಲ್ಲಿ ಪ್ರತ್ಯೇಕವಾಗಿ ಇದ್ದಾರೆ ಎಂದು ಟ್ವಿಟ್ಟರ್ ಖಾತೆ ಮಾಹಿತಿ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+