• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Video: ಕೃಷಿ ಸಂಬಂಧಿತ ಕಾಯ್ದೆಯ ಪ್ರತಿಯನ್ನು ಸುಟ್ಟು ಹಾಕಿದ ರೈತರು

|

ನವದೆಹಲಿ, ಜನವರಿ.13: ಕೃಷಿ ಸಂಬಂಧಿತ ಕಾಯ್ದೆಗಳಿಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದ ಹೊರತಾಗಿಯೂ ಕೇಂದ್ರ ಸರ್ಕಾರದ ವಿರುದ್ಧ ರೈತರ ಹೋರಾಟ ಮುಂದುವರಿದಿದೆ. ದೆಹಲಿಯ ಸಿಂಘು ಗಡಿಯಲ್ಲಿ ವಿವಾದಿತ ಕಾಯ್ದೆಯ ಪ್ರತಿಗಳನ್ನು ರೈತರು ಸುಟ್ಟು ಹಾಕಿದ್ದಾರೆ.

ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ವಿವಾದಿತ ಕಾಯ್ದೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಭಟನಾನಿರತ ರೈತರು ಎಚ್ಚರಿಕೆ ನೀಡಿದ್ದಾರೆ. ರೈತರು ನಡೆಸುತ್ತಿರುವ ಹೋರಾಟದಲ್ಲಿ ಯಾರಾದರೂ ರಾಷ್ಟ್ರ ವಿರೋಧಿಗಳಂತೆ ಮಾತನಾಡಿದರೆ ಅಂಥವರನ್ನು ಬಂಧಿಸಲಿದೆ.

ಸುಪ್ರೀಂಕೋರ್ಟ್ ಸಮಿತಿಯು ಕೃಷಿ ಕಾನೂನಿನ ಪರವಾಗಿದೆ: ನಾವು ಒಪ್ಪಲ್ಲ ಎಂದ ರೈತ ಸಂಘಟನೆಗಳು

ಕೃಷಿ ಸಂಬಂಧಿತ ಕಾಯ್ದೆಗೆ ಹೇಗೆ ಅಂತ್ಯ ಹಾಡಬೇಕು ಎಂಬುದರ ಬಗ್ಗೆ ಕೇಂದ್ರ ಸರ್ಕಾರವು ಲಕ್ಷ್ಯ ವಹಿಸಲಿ. ಸರ್ಕಾರವು ಒಂದು ವೇಳೆ 10 ವರ್ಷ ಹಳೆಯದಾದ ಟ್ರ್ಯಾಕ್ಟರ್ ಗಳ ಬಳಕೆಯನ್ನು ನಿಷೇಧಿಸಿದರೆ ಅದೇ 10 ವರ್ಷಗಳ ಹಳೆಯ ಟ್ರ್ಯಾಕ್ಟರ್ ಗಳನ್ನು ದೆಹಲಿಯ ರಸ್ತೆಗಳಲ್ಲಿ ಚಾಲನೆ ಮಾಡಿ ತೋರಿಸುತ್ತೇವೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ವಕ್ತಾರ ರಾಕೇಶ್ ತಿಕೈತ್ ತಿಳಿಸಿದ್ದಾರೆ.

ಯಾವುದೇ ಸಮಿತಿ ಸೇರುವುದಿಲ್ಲ ಎಂದ ರೈತರು:

ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳು ರೈತರ ಹೋರಾಟಕ್ಕೆ ಪ್ರಮುಖ ಕಾರಣಗಳಾಗಿವೆ. ಈ ಕಾಯ್ದೆಗಳು ಮತ್ತು ರೈತರ ಜೊತೆಗೆ ಚರ್ಚೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ತಜ್ಞರ ಸಮಿತಿಯೊಂದನ್ನು ರಚಿಸುವುದಾಗಿ ಆದೇಶಿಸಿದೆ. ಆದರೆ, ಸುಪ್ರೀಂಕೋರ್ಟ್ ರಚಿಸಿರುವ ಸಮಿತಿಯು ಕೃಷಿ ಕಾನೂನುಗಳ ಪರವಾಗಿದ್ದು, ನಾವು ಯಾವುದೇ ಸಮಿತಿಯಲ್ಲೂ ಸೇರುವುದಿಲ್ಲ ಎಂದು ಪ್ರತಿಭಟನಾನಿರತ ರೈತ ಸಂಘಟನೆಗಳು ಹೇಳುತ್ತಿವೆ.

English summary
Video: Farmers Burn Farm Laws Copies At Singhu Border And Vow to Continue Protest Against Central Govt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X