ವಿಡಿಯೋ; ರೈಲಿಗೆ ಸಿಲುಕುತ್ತಿದ್ದವನನ್ನು ಕೂದಲೆಳೆ ಅಂತರದಲ್ಲಿ ಪಾರು ಮಾಡಿದ ಸಿಬ್ಬಂದಿ

ನವದೆಹಲಿ, ಮಾರ್ಚ್ 12: ಚಲಿಸುತ್ತಿದ್ದ ರೈಲು ಹತ್ತಲು ಹೋದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಜಾರಿ ಬಿದ್ದಿದ್ದು, ಆರ್‌ಪಿಎಫ್ ಸಿಬ್ಬಂದಿ ಕ್ಷಣ ಮಾತ್ರದಲ್ಲಿ ಆತನನ್ನು ಸಾವಿನಿಂದ ಪಾರು ಮಾಡಿದ ಘಟನೆ ಗೋವಾದಲ್ಲಿ ನಡೆದಿದೆ.

ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಕೂದಲೆಳೆಯ ಅಂತರದಲ್ಲಿ ಆತನನ್ನು ಸಾವಿನಿಂದ ಪಾರು ಮಾಡಿದ ಸಿಬ್ಬಂದಿಯ ಸಮಯ ಪ್ರಜ್ಞೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಗೋವಾದ ವಾಸ್ಕೋಡ ಗಾಮಾ ರೈಲು ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ, ಚಲಿಸುತ್ತಿದ್ದ ರೈಲು ಹತ್ತಲು ಪ್ರಯತ್ನಿಸಿದ್ದಾನೆ. ಹತ್ತುವ ಸಂದರ್ಭ ಸಮತೋಲನ ಕಳೆದುಕೊಂಡ ಆತ ಪ್ಲಾಟ್‌ಫಾರಂ ಹಾಗೂ ರೈಲಿನ ನಡುವೆ ಸಿಲುಕಿಕೊಂಡಿದ್ದಾನೆ. ರೈಲು ಚಲಿಸುತ್ತಿದ್ದು, ಇನ್ನೇನು ರೈಲಿನ ಅಡಿಗೇ ಸಿಲುಕುತ್ತಿದ್ದ ಆತನನ್ನು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ಕೆಎಂ ಪಾಟೀಲ್ ತಕ್ಷಣವೇ ಎಳೆದುಕೊಂಡು ರಕ್ಷಣೆ ಮಾಡಿದ್ದಾರೆ. ಒಂದೇ ಒಂದು ಸೆಕೆಂಡಿನಲ್ಲಿ ಆತನ ಪ್ರಾಣವನ್ನು ಕಾಪಾಡಿದ್ದಾರೆ.

Video Of RPF Personnel Life Saving Act Goes Viral

ರೈಲ್ವೆ ಸಚಿವಾಲಯ ಈ ಘಟನೆಯ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದೆ. ಚಲಿಸುತ್ತಿರುವ ರೈಲನ್ನು ಹತ್ತಬೇಡಿ. ಜೀವಕ್ಕೇ ಎರವಾಗುವ ಇಂಥ ಕೆಲಸಗಳನ್ನು ಮಾಡಬೇಡಿ ಎಂದು ಜನರಿಗೆ ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+