• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಹಿಂಸಾಚಾರ: 7 ದಿನ ಪೊಲೀಸ್ ಕಸ್ಟಡಿಗೆ ಆರೋಪಿ ದೀಪ್ ಸಿಧು

|

ನವದೆಹಲಿ, ಫೆಬ್ರವರಿ.10: ನವದೆಹಲಿಯಲ್ಲಿ 72ನೇ ಗಣರಾಜ್ಯೋತ್ಸವದ ದಿನವೇ ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಿಸಿದ ಪ್ರಮುಖ ಆರೋಪಿ ದೀಪ್ ಸಿಧುರನ್ನು 7 ದಿನಗಳವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ದೆಹಲಿ ಕೋರ್ಟ್ ಆದೇಶಿಸಿದೆ.

ನವದೆಹಲಿಯಿಂದ 100 ಕಿಲೋ ಮೀಟರ್ ದೂರದಲ್ಲಿರುವ ಹರಿಯಾಣದ ಕರ್ನಲ್ ಬಳಿ ಆರೋಪಿ ದೀಪ್ ಸಿಧುರನ್ನು ದೆಹಲಿ ವಿಶೇಷ ತಂಡದ ಪೊಲೀಸರು ಮಂಗಳವಾರ ಬಂಧಿಸಿದ್ದರು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಟ್ರ್ಯಾಕ್ಟರ್ ಜಾಥಾ ಹಿಂಸಾಚಾರಕ್ಕೆ ತಿರುಗಿತ್ತು. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಒಂದು ಗುಂಪು ಓಡಾಡುತ್ತಿದ್ದರೆ, ಮತ್ತೊಂದು ತಂಡವು ಕೆಂಪುಕೋಟೆಗೆ ನುಗ್ಗಿ, ತ್ರಿವರ್ಣ ಧ್ವಜ ಎದುರಿನಲ್ಲಿ ಸಿಖ್ ಧ್ವಜವನ್ನು ಹಾರಿಸಿತ್ತು.

ದೆಹಲಿ ಗಲಭೆ; ಕೆಂಪು ಕೋಟೆ ಘಟನೆ ಫೇಸ್‌ಬುಕ್ ಲೈವ್ ಮಾಡಿದ್ದವನ ಬಂಧನ

ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ದೆಹಲಿ ಪೊಲೀಸರು 12 ಮಂದಿ ಪ್ರಮುಖ ಆರೋಪಿಗಳ ಭಾವಚಿತ್ರವನ್ನು ಬಿಡುಗಡೆಗೊಳಿಸಿದ್ದರು. ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

ರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ:

ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪಿಗಳ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಪ್ರಮುಖ ಆರೋಪಿಗಳಾದ ಜಜ್ಬೀರ್ ಸಿಂಗ್, ಬುಟಾ ಸಿಂಗ್, ಸುಖ್ ದೇವ್ ಸಿಂಗ್, ಇಕ್ಬಾಲ್ ಸಿಂಗ್ ಬಗ್ಗೆ ಮಾಹಿತಿ ನೀಡಿದರೆ 50,000 ರೂಪಾಯಿ ನಗದು ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ಕಳೆದ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಮೂರು ಗಡಿಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಈಗಾಗಲೇ 77 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ.

English summary
Delhi Violence: Actor Deep Sidhu Sent To 7-Day Police Custody By Delhi court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X