ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯ ಕೆಂಪುಕೋಟೆ ಮೇಲೆ ಆಯುಧ ಹಿಡಿದು ನಿಂತ ಆರೋಪಿ ಬಂಧನ

|
Google Oneindia Kannada News

ನವದೆಹಲಿ, ಫೆಬ್ರವರಿ.22: ಭಾರತದ 72ನೇ ಗಣರಾಜ್ಯೋತ್ಸವದ ದಿನವೇ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸೋಮವಾರ ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಜನವರಿ.26ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿಯ ನಿವಾಸಿ ಜಸ್ಪ್ರೀತ್ ಸಿಂಗ್ ಎಂಬ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಲಾಗಿದೆ. ಹಿಂಸಾಚಾರದ ದಿನ ಕೆಂಪುಕೋಟೆಯ ಕಮಾನುಗಳ ಎರಡೂ ಬದಿಯಲ್ಲಿ ಹತ್ತಿದ್ದ ಆರೋಪಿಯು ಆಯುಧವೊಂದನ್ನು ಹಿಡಿದು ಆಕ್ರಮಣಕಾರಿ ರೂಪದಲ್ಲಿ ನಿಂತಿದ್ದನು.

ದೆಹಲಿ ಹಿಂಸಾಚಾರ ನಡೆದ ದಿನ ಆರೋಪಿಯು ಕೈಯಲ್ಲಿ ಉಕ್ಕಿನ ಆಯುಧ ಹಿಡಿದಿರುವುದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾವಚಿತ್ರವೊಂದನ್ನು ಬಿಡುಗಡೆ ಮಾಡಿದ್ದಾರೆ. ಆಯುಧ ಹಿಡಿದ ಒಂದು ಚಿತ್ರ ಮತ್ತು ಆರೋಪಿಯ ಮತ್ತೊಂದು ಚಿತ್ರವನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ.

Delhi Violence: Police have arrested Another Accused Jaspreet Singh.

ದೆಹಲಿ ಹಿಂಸಾಚಾರ ಪ್ರಕರಣದ ಹಿನ್ನೆಲೆ:

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ಜನವರಿ.26ರಂದು ರೈತರು ನಡೆಸಿದ ಟ್ರ್ಯಾಕ್ಟರ್ ಜಾಥಾ ಹಿಂಸಾಚಾರಕ್ಕೆ ತಿರುಗಿತ್ತು. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಒಂದು ಗುಂಪು ಓಡಾಡುತ್ತಿದ್ದರೆ, ಮತ್ತೊಂದು ತಂಡವು ಕೆಂಪುಕೋಟೆಗೆ ನುಗ್ಗಿ, ತ್ರಿವರ್ಣ ಧ್ವಜ ಎದುರಿನಲ್ಲಿ ಸಿಖ್ ಧ್ವಜವನ್ನು ಹಾರಿಸಿತ್ತು. ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 12 ಮಂದಿ ಪ್ರಮುಖ ಆರೋಪಿಗಳ ಭಾವಚಿತ್ರವನ್ನು ಬಿಡುಗಡೆಗೊಳಿಸಿದ್ದರು. ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

Delhi Violence: Police have arrested Another Accused Jaspreet Singh.

ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪಿಗಳ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಪ್ರಮುಖ ಆರೋಪಿಗಳಾದ ಜಜ್ಬೀರ್ ಸಿಂಗ್, ಬುಟಾ ಸಿಂಗ್, ಸುಖ್ ದೇವ್ ಸಿಂಗ್, ಇಕ್ಬಾಲ್ ಸಿಂಗ್ ಬಗ್ಗೆ ಮಾಹಿತಿ ನೀಡಿದರೆ 50,000 ರೂಪಾಯಿ ನಗದು ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

English summary
Delhi Violence: Police have arrested Another Accused Jaspreet Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X