ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Video: ಭಯ ಹುಟ್ಟಿಸುತ್ತೆ ಕೆಂಪುಕೋಟೆಯಲ್ಲಿ ನಡೆದ ಈ ದೃಶ್ಯ!

|
Google Oneindia Kannada News

ನವದೆಹಲಿ, ಜನವರಿ.26: ಭಾರತದ 72ನೇ ಗಣರಾಜ್ಯೋತ್ಸವದ ದಿನವೇ ದೆಹಲಿಯ ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಾಕಾರರು ನಡೆದುಕೊಂಡ ರೀತಿಯು ಎಂಥವರನ್ನೂ ಬೆಚ್ಚಿ ಬೀಳಿಸುವಂತಿದೆ. ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಪ್ರತಿಭಟನೆಯಿಂದ ಮಂಗಳವಾರ ನವದೆಹಲಿ ಅಕ್ಷರಶಃ ರಣರಂಗವಾಯಿತು. ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಬಿಗಿ ಭದ್ರತೆ ನಡುವೆ ಕೆಂಪುಕೋಟೆಗೆ ಪ್ರತಿಭಟನಾನಿರತ ರೈತರು ನುಗ್ಗಿದರು.

ಕೆಂಪುಕೋಟೆ ಮೇಲೆ ರೈತಧ್ವಜ ಹಾರುವ ಮೊದಲು ನಡೆದಿದ್ದು ಏನು? ಕೆಂಪುಕೋಟೆ ಮೇಲೆ ರೈತಧ್ವಜ ಹಾರುವ ಮೊದಲು ನಡೆದಿದ್ದು ಏನು?

ಐತಿಹಾಸಿಕ ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಾಕಾರರು ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಎನ್ನುವುದನ್ನೂ ನೋಡದೇ ಮನಬಂದಂತೆ ಹಲ್ಲೆ ನಡೆಸಿರುವುದು ಈ ವಿಡಿಯೋದಲ್ಲಿ ಗೋಚರಿಸುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಇದೀಗ ಅದೇ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

Viral Video: Delhi Protesters Attacked Police At Red Fort

ಸಿಖ್ ಧ್ವಜ ಹಾರಿಸಿದ ಪ್ರತಿಭಟನಾಕಾರರು:

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿದ್ದ 63 ದಿನಗಳ ಹೋರಾಟ ಮಂಗಳವಾರ ಹಿಂಸಾತ್ಮಕ ರೂಪ ಪಡೆದುಕೊಂಡಿತು. ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಾಕಾರರು ತ್ರಿವರ್ಣಧ್ವಜ ಹಾರಾಡುವ ನವದೆಹಲಿ ಕೆಂಪುಕೋಟೆ ಮೇಲೆ ರೈತರು ನಿಶಾನ್ ಸಾಹೇಬ್ ಧ್ವಜವನ್ನು ಹಾರಿಸಿದರು.

English summary
Viral Video: Delhi Protesters Attacked Police At Red Fort.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X