ದೆಹಲಿಗರೇ ಬೃಹತ್ ಸಂಖ್ಯೆಯಲ್ಲಿ ಮತ ಹಾಕಿ : ಮೋದಿ
ನವದೆಹಲಿ, ಫೆ. 7: ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕೆಂದು ಮತದಾರರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
"ಇಂದು ದೆಹಲಿಯಲ್ಲಿ ಮತದಾನ ನಡೆಯುತ್ತಿದೆ. ಚುನಾವಣೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು" ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿ ಕೋರಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ "ವಿಶೇಷವಾಗಿ ಯುವ ಮತದಾರ ಸ್ನೇಹಿತರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕೆಂದು ನಾನು ಕೋರುತ್ತೇನೆ" ಎಂದು ತಿಳಿಸಿದ್ದಾರೆ. [ದೆಹಲಿ ವಿಧಾನಸಭೆ ಮತದಾನ ಲೈವ್]
ನವದೆಹಲಿ ವಿಧಾನಸಭೆಗಾಗಿ 70 ಮತಕ್ಷೇತ್ರಗಳಲ್ಲಿ ಶನಿವಾರ ಮತದಾನ ನಡೆಯುತ್ತಿದೆ. ರಾಜ್ಯದ 12,000 ಮತಗಟ್ಟೆಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ. ನವದೆಹಲಿಯಲ್ಲಿ ಸುಮಾರು 1.33 ಕೋಟಿ ಜನರು ಮತದಾನದ ಹಕ್ಕು ಹೊಂದಿದ್ದಾರೆ. ಒಟ್ಟು 673 ಅಭ್ಯರ್ಥಿಗಳು ಕಣದಲ್ಲಿದ್ದಾರೆ.












Click it and Unblock the Notifications