ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಬಿಡದೆ ಸರಿಯುತ್ತಿರುವ ಮಳೆ, ರಸ್ತೆಗಳು ಜಲಾವೃತ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 11: ದೆಹಲಿಯಲ್ಲಿ ಶನಿವಾರ ಬೆಳಗ್ಗೆಯಿಂದ ಬಿಡದೆ ಒಂದೇ ಸಮನೆ ಮಳೆ ಸುರಿಯುತ್ತಿದೆ, ರಸ್ತೆಗಳು ಜಲಾವೃತವಾಗಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.

ಮೋತಿ ಬಾಗ್, ಆರ್‌ಕೆ ಪುರಂ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದೆ, ಮುಂದಿನ ಎರಡು ಗಂಟೆಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಸೆ. 15ರವರೆಗೂ ಭಾರಿ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ರಾಜ್ಯದಲ್ಲಿ ಸೆ. 15ರವರೆಗೂ ಭಾರಿ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ದೆಹಲಿ, ಎನ್‌ಸಿಆರ್, ಬಹದ್ದೂರ್‌ಗಢ, ಗುರುಗ್ರಾಮ, ಲೋನಿ ದೇಹತ್, ಘಾಜಿಯಾಬಾದ್, ಇಂದಿರಾಪುರಂ, ರೋಟಕ್, ಚರ್ಕಿ ದಾದ್ರಿ, ಜಾಜರ್, ಜಿಂದ್, ಹಂಸಿ, ಮೀರತ್ ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ.

Delhi Wakes Up To Heavy Rainfall, Waterlogging In Several Areas

ಕಳೆದ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ಮತ್ತು ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಚತ್ತೀಸ್‌ಗಢ ಮತ್ತು ಮಧ್ಯ ಮಹಾರಾಷ್ಟ್ರಗಳ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.

ಕರಾವಳಿ ಕರ್ನಾಟಕದ ಭಾಗಗಳು ಮತ್ತು ತೆಲಂಗಾಣ, ಕೇರಳ, ಉತ್ತರ ಪ್ರದೇಶ, ಜಮ್ಮು- ಕಾಶ್ಮೀರ, ಲಡಾಖ್, ಹರಿಯಾಣ, ದೆಹಲಿ, ಪಂಜಾಬ್, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ವಿದರ್ಭ, ಕೊಂಕಣ ಮತ್ತು ಗೋವಾಮತ್ತು ಪ್ರತ್ಯೇಕ ಭಾಗಗಳಲ್ಲಿ ಇಂದು ಸಹ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಇಲಾಖೆ ತಿಳಿಸಿದೆ.

ಗುಜರಾತ್, ಒಡಿಶಾ, ಛತ್ತೀಸ್‌ಗಡ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಹಿಮಾಚಲ ಹಾಗೂ ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 11ರವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆ ಸೂಚನೆಸೆಪ್ಟೆಂಬರ್ 11ರವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆ ಸೂಚನೆ ವಾಯುಭಾರ ಕುಸಿತ ಹಾಗೂ ಪಶ್ಚಿಮ ವಾಯವ್ಯ ದಿಕ್ಕಿನೆಡೆಗೆ ಚಲನೆಯ ಪ್ರಭಾವದ ಅಡಿಯಲ್ಲಿ, ಪಶ್ಚಿಮ ಕರಾವಳಿಯುದ್ದಕ್ಕೂ ಮಾರುತಗಳು ಬಲಗೊಳ್ಳಲಿದ್ದು, ಈ ಅವಧಿಯಲ್ಲಿ ಉತ್ತರ ಕೊಂಕಣ, ದಕ್ಷಿಣ ಗುಜರಾತ್‌, ಒಡಿಶಾ, ಛತ್ತೀಸ್‌ಗಡದಲ್ಲಿ ವ್ಯಾಪಕ ಮಳೆಯಾಗುವುದಾಗಿ ತಿಳಿಸಿದೆ.

Delhi Wakes Up To Heavy Rainfall, Waterlogging In Several Areas

ಸೆಪ್ಟೆಂಬರ್ 12ರವರೆಗೂ ಮಳೆ ಮುಂದುವರಿಕೆ ಸೆಪ್ಟೆಂಬರ್ 12ರವರೆಗೂ ಮಳೆ ಮುಂದುವರಿಕೆ ಮಧ್ಯ ಪ್ರದೇಶದ ಪಶ್ಚಿಮ ಭಾಗದಲ್ಲಿ ಚಂಡಮಾರುತ ಪ್ರಭಾವದಿಂದಾಗಿ ಗುಜರಾತ್, ರಾಜಸ್ಥಾನ ಹಾಗೂ ಮಧ್ಯ ಪ್ರದೇಶದಲ್ಲಿ ಸೆಪ್ಟೆಂಬರ್ 9ರಿಂದ 12ರವರೆಗೂ ಮಳೆ ಮುಂದುವರೆಯಲಿದೆ. ಹರಿಯಾಣ, ನೈಋತ್ಯ ಉತ್ತರ ಪ್ರದೇಶದಲ್ಲಿ ಸೆಪ್ಟೆಂಬರ್ 11-12 ರಂದು ಮಳೆ ಚುರುಕು ಪಡೆಯಲಿರುವುದಾಗಿ ತಿಳಿಸಿದೆ.

ಕೊಂಕಣ ಹಾಗೂ ಗೋವಾಗೆ ಅತ್ಯಧಿಕ ಮಳೆಯಾಗುವ ಸೂಚನೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಕೂಡ ಸಾಮಾನ್ಯ ಮಳೆ ಮುಂದುವರೆಯುದಾಗಿ ತಿಳಿಸಿದೆ. ತೆಲಂಗಾಣದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಸುಮಾರು ಎಂಟು ಮಂದಿ ಸಾವನ್ನಪ್ಪಿರುವ ವರದಿಯಾಗಿದೆ.

ಉತ್ತರಾಖಂಡ, ಜಮ್ಮು, ಹಿಮಾಚಲ ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಮೇಲೆ ಹೆಚ್ಚಾಗಲಿದ್ದು, ಈ ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರಮಾಣದ ಮಳೆಯಾಗುವುದಾಗಿ ತಿಳಿಸಲಾಗಿದೆ.

ಹೀಗಾಗಿ ಒಡಿಶಾದ 11 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಬೈನಲ್ಲಿ ಭಾರೀ ಮಳೆ ಮುಂಬೈನಲ್ಲಿ ಭಾರೀ ಮಳೆ ಸೆಪ್ಟೆಂಬರ್ 12ರ ನಂತರವೂ ದೇಶದ ಹಲವು ಕಡೆಗಳಲ್ಲಿ ಮಳೆ ಮತ್ತಷ್ಟು ಬಿರುಸು ಪಡೆಯಲಿದೆ ಎಂದು ತಿಳಿಸಿದೆ.

ಸೆಪ್ಟೆಂಬರ್ 13ರಂದು ಕರ್ನಾಟಕ, ಕೇರಳ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವುದಾಗಿ ತಿಳಿಸಿದೆ. ಮಹಾರಾಷ್ಟ್ರದ ಪುಣೆ ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಈ ವಾರವಿಡೀ ಮುಂಬೈನಲ್ಲಿ ಅಧಿಕ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಥಾಣೆ, ಪಾಲ್ಗರ್ ಸೇರಿ ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ ಸೆಪ್ಟೆಂಬರ್ 15ರವರೆಗೂ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅತ್ಯುತ್ತಮ ಎಸ್‌ಯುವಿಯನ್ನು ಹೊಂದಲು ನಿಮಗೊಂದು ಅವಕಾಶ. ಇಲ್ಲಿ ಕ್ಲಿಕ್ ಮಾಡಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಹೆಚ್ಚು ಮಳೆಯಾಗಲಿದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಸೆಪ್ಟೆಂಬರ್ 12ರವರೆಗೂ ಸುರಿಯಲಿದೆ ಭಾರಿ ಮಳೆರಾಜ್ಯದಲ್ಲಿ ಸೆಪ್ಟೆಂಬರ್ 12ರವರೆಗೂ ಸುರಿಯಲಿದೆ ಭಾರಿ ಮಳೆ ಶಿವಮೊಗ್ಗ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕಳದೆ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇದೆ 15ರವರೆಗೂ ಮಳೆ ಮುಂದುವರೆಯಲಿದೆ ಎಂದು ಭಾರತಿಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

English summary
Heavy rainfall lashed parts of the national capital on Saturday morning bringing the temperature down in the city
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X