ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಮಾರ್ಚ್ 09: ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಕೇರಳ ಮತ್ತು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು ನಡೆಯಲಿದೆ. ಅಸ್ಸಾಂನಲ್ಲಿ 3 ಹಂತಗಳಲ್ಲಿ ಮತದಾನ ನಡೆಯಲಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಮಾತ್ರ ಎಂಟು ಹಂತದಲ್ಲಿ ಮತದಾನ ನಡೆಯುವುದು ಏಕೆಂದು ಅರ್ಜಿದಾರರು ಪ್ರಶ್ನಿಸಿದ್ದರು.

ಪಶ್ಚಿಮ ಬಂಗಾಳದ ಪ್ರತಿ ಹಂತದ ಚುನಾವಣೆಯಲ್ಲೂ ಮೋದಿಯಿಂದ 2 ರ‍್ಯಾಲಿ?ಪಶ್ಚಿಮ ಬಂಗಾಳದ ಪ್ರತಿ ಹಂತದ ಚುನಾವಣೆಯಲ್ಲೂ ಮೋದಿಯಿಂದ 2 ರ‍್ಯಾಲಿ?

ನ್ಯಾಯವಾದಿ ಮನೋಹರ್ ಲಾಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠ ವಜಾಗೊಳಿಸಿದೆ.

WB Election: SC Rejects Plea Challenging Election Commissions Decision To Hold Polls In 8 Phases

ನಾವು ನಿಮ್ಮ ಮಾತನು ಒಪ್ಪಲು ಸಾಧ್ಯವಿಲ್ಲ, ನಾವು ಇಡೀ ಪ್ರಕರಣವನ್ನು ನೋಡಿದ್ದೇವೆ. ಈ ಅರ್ಜಿ ವಜಾಗೊಳಿಸಿದ್ದೇವೆ ಎಂದು ಕೋರ್ಟ್ ಹೇಳಿದೆ. ಮಾರ್ಚ್ 27ಕ್ಕೆ ಮೊದಲ ಹಂತದಲ್ಲಿ ಚುನಾವಣೆ ಆರಂಭಗೊಳ್ಳಲಿದೆ. ಏಪ್ರಿಲ್ 29ಕ್ಕೆ ಅಂತಿಮ ಹಂತದ ಚುನಾವಣೆ ನಡೆಯಲಿರುವುದಾಗಿ ಆಯೋಗ ತಿಳಿಸಿದೆ. ಮೇ 2ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ.

ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ವಿಧಾನಸಭೆಗಳಲ್ಲಿ ತಕ್ಷಣವೇ ನೀತಿ ಸಂಹಿತೆ ಜಾರಿಗೆ ಬರಲಿದೆ. 5 ರಾಜ್ಯಗಳಲ್ಲಿನ 824 ಕ್ಷೇತ್ರಗಳಲ್ಲಿ 18.68 ಕೋಟಿ ಮತದಾರರಿದ್ದಾರೆ. ಚುನಾವಣಾ ಆಯೋಗದ ಸಹಾಯವಾಣಿ ಸಂಖ್ಯೆ 1950 ಬಳಸಲು ಸೂಚಿಸಲಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2021 ದಿನಾಂಕ ಪ್ರಕಟ...ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2021 ದಿನಾಂಕ ಪ್ರಕಟ...

ಮೊದಲ ಹಂತ: ಮಾರ್ಚ್ 27 ಎರಡನೇ ಹಂತ: ಏಪ್ರಿಲ್ 1 ಮೂರನೇ ಹಂತ: ಏಪ್ರಿಲ್ 6 ನಾಲ್ಕನೇ ಹಂತ: ಏಪ್ರಿಲ್ 10 ಐದನೇ ಹಂತ: ಏಪ್ರಿಲ್ 17 ಆರನೇ ಹಂತ: ಏಪ್ರಿಲ್ 22 ಏಳನೇ ಹಂತ: ಏಪ್ರಿಲ್ 26 ಎಂಟನೇ ಹಂತ: ಏಪ್ರಿಲ್ 29ಕ್ಕೆ ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ ಮಾತ್ರ 8 ಹಂತಗಳ ಚುನಾವಣೆ ಏಕೆ ಎಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

English summary
The Supreme Court on Tuesday rejected a plea challenging the decision of the Election Commission to hold Assembly elections in the State of West Bengal in eight phases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X