ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀನಾಮೆ ನೀಡಿದ ಕಾಂಗ್ರೆಸ್, ಜೆಡಿಎಸ್ ಶಾಸಕರ ಹಿಂದೆ ನಾವಿಲ್ಲ: ಸದಾನಂದ ಗೌಡ

|
Google Oneindia Kannada News

ನವದೆಹಲಿ, ಜುಲೈ 09: ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದು ಅವರ ವೈಯಕ್ತಿಕ ವಿಚಾರ, ಈ ಬೆಳವಣಿಗೆಯ ಹಿಂದೆ ಬಿಜೆಪಿ ಇಲ್ಲ ಎಂದು ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದರು.

ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನ 14 ಶಾಸಕರು ರಾಜೀನಾಮೆ ನೀಡಿದ್ದರ ಕುರಿತು ಪ್ರತಿಕ್ರಿಯೆ ನೀಡಿದ ಅವರು, 'ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಮೇಲೆ ನಂಬಿಕೆ ಇಲ್ಲದ ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಬಿಜೆಪಿಯ ಪಾತ್ರವಿಲ್ಲ' ಎಂದರು.

ಸಿಎಲ್‌ಪಿ ಸಭೆಗೆ ಗೈರು, ಸಿದ್ದರಾಮಯ್ಯಗೆ ಎಂಟಿಬಿ ನಾಗರಾಜ್ ಪತ್ರಸಿಎಲ್‌ಪಿ ಸಭೆಗೆ ಗೈರು, ಸಿದ್ದರಾಮಯ್ಯಗೆ ಎಂಟಿಬಿ ನಾಗರಾಜ್ ಪತ್ರ

"ನಾವು ಹಿಂದೊಮ್ಮೆ ಸರ್ಕಾರವನ್ನು ಕೆಡವಲು ಪ್ರಯತ್ನಿಸಿದ್ದೆವು ನಿಜ. ಆದರೆ ಅದಾದ ಮೇಲೆ ಒಮ್ಮೆಯೂ ಆ ಕೆಲಸಕ್ಕೆ ಕೈ ಹಾಕಿಲ್ಲ. ಈಗ ಸಮ್ಮಿಶ್ರ ಸರ್ಕಾರದ ಬಗ್ಗೆ ಆ ಪಕ್ಷದ ನಾಯಕರಲ್ಲೇ ವಿಶ್ವಾಸವಿಲ್ಲ. ಆದ್ದರಿಂದ ರಾಜೀನಾಮೆ ನೀಡಿದ್ದಾರೆ" ಎಂದು ಅವರು ಹೇಳಿದರು.

We are not behind any MLAs from Congress or JDS: DV Sadananda Gowda

ರಾಜೀನಾಮೆ ನೀಡಿರುವ ಶಾಸಕರಿಗೆ ಕೊನೆ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯರಾಜೀನಾಮೆ ನೀಡಿರುವ ಶಾಸಕರಿಗೆ ಕೊನೆ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯ

"ಕರ್ನಾಟಕದಲ್ಲಿ ಬಿಜೆಪಿಯು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಕುದುರೆ ವ್ಯಾಪಾರ ನಡೆಯುತ್ತಿದೆ" ಎಂಮದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಆರೋಪಿಸಿದ್ದು, ಕಾಂಗ್ರೆಸ್ ಸಂಸದರು ಸದನದಿಮದ ಹೊರ ಹೋಗಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Union Minister and BJP leader DV Sadananda Gowda on current political situation in Karnataka, In the initial stage we tried once but afterwards we kept quiet. Congress & JDS MLAs don't have faith in their own leaders and government. We are not behind any MLAs from Congress or JDS.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X