Get Updates
Get notified of breaking news, exclusive insights, and must-see stories!

ರಾಕೇಶ್ ಅಸ್ಥಾನಾ ವಿರುದ್ಧ ದಾಖಲೆಗಳಿವೆ: ದೆಹಲಿ ಹೈಕೋರ್ಟ್‌ಗೆ ಸಿಬಿಐ

ನವದೆಹಲಿ, ಅಕ್ಟೋಬರ್ 01: ದೆಹಲಿ ಹೈಕೋರ್ಟ್‌ ಅಂಗಳ ತಲುಪಿರುವ ಸಿಬಿಐನ ಅಧಿಕಾರಿಗಳ ನಡುವಿನ ಜಿದ್ದಾಜಿದ್ದಿಯಲ್ಲಿ ಸಿಬಿಐ ನಂ2 ಅಧಿಕಾರಿ ರಾಕೇಶ್ ಅಸ್ಥಾನಾ ವಿರುದ್ಧ ಸಿಬಿಐ ಗುಟುರು ಹಾಕಿದೆ.

ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್‌ ಅನ್ನು ರದ್ದು ಮಾಡಬೇಕೆಂದು ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ಅರ್ಜಿ ಗೆ ವಿರೋಧ ವ್ಯಕ್ತಪಡಿಸಿರುವ ಸಿಬಿಐ, ರಾಕೇಶ್ ಅಸ್ಥಾನಾ ವಿರುದ್ಧ ದಾಖಲೆಗಳಿವೆ ಹಾಗಾಗಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದಿದೆ.

ಸಿಬಿಐ ಹೆಚ್ಚುವರಿ ನಿರ್ದೇಶಕರಾಗಿದ್ದ ರಾಕೇಶ್ ಅಸ್ಥಾನಾ ಅವರು ಲಂಚ ಪಡೆದಿದ್ದಾರೆ ಎಂದು ಸಿಬಿಐ ಎಫ್‌ಐಆರ್ ದಾಖಲು ಮಾಡಿತ್ತು. ತನ್ನ ಬಳಿ ಇದಕ್ಕೆ ದಾಖಲೆಗಳಿದ್ದು, ದಾಖಲೆಗಳನ್ನು ಕೇಂದ್ರ ಜಾಗೃತ ದಳ ಪರಿಶೀಲನೆ ಮಾಡುತ್ತಿರುವ ಕಾರಣ ಕೋರ್ಟ್‌ಗೆ ಈಗ ಸಲ್ಲಿಸಲು ಆಗುತ್ತಿಲ್ಲ ಎಂದು ಸಿಬಿಐ ಹೇಳಿದೆ.

have document against Rakesh Astana: CBI to Delhi HC

ಹೆಚ್ಚುವರಿ ನಿರ್ದೇಶಕ ರಾಕೇಶ್ ಅಸ್ಥಾನಾ ವಿರುದ್ದ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರು ಲಂಚ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದರು, ರಾಕೇಶ್ ಅಸ್ಥಾನಾ ಅವರ ಕಚೇರಿ ಮೇಲೆ ದಾಳಿ ಸಹ ಆಗಿತ್ತು.

ಈ ಬೆಳವಣಿಗೆ ನಡೆಯುತ್ತಿದ್ದಂತೆ ಮಧ್ಯೆ ಪ್ರವೇಶಿಸಿದ ಕೇಂದ್ರ ಸರ್ಕಾರ ಇಬ್ಬರೂ ನಿರ್ದೇಶಕರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಸಿಬಿಐ ನಿರ್ದೇಶಕರನ್ನಾಗಿ ನಾಗೇಶ್ವರ ರಾವ್ ಅವರನ್ನು ನೇಮಿಸಿತು.

ಸಿಬಿಐ ತನ್ನ ಮೇಲೆ ದಾಖಲಿಸಿರುವ ಎಫ್‌ಐಆರ್‌ ಅನ್ನು ರದ್ದು ಮಾಡಬೇಕು ರಾಕೇಶ್ ಅಸ್ಥಾನಾ ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಅಲ್ಲದೆ ಅಲೋಕ್ ವರ್ಮಾ ಸಹ ತಮ್ಮನ್ನು ವಿನಾ ಕಾರಣ ಕಡ್ಡಾಯ ರಜೆ ಮೇಲೆ ಕಳುಹಿಸಿದ ಕ್ರಮವನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲು ಏರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+