70 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ: ಜನ್ಮದಿನದಂದು ಕೇಜ್ರಿವಾಲ್ ಸಂಕಲ್ಪ

ನವದೆಹಲಿ, ಆಗಸ್ಟ್ 16: ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಎಲ್ಲಾ 70 ಸ್ಥಾನಗಳಲ್ಲೂ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮ್ಮ 51 ನೇ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಂಡ ಕೇಜ್ರಿವಾಲ್, " ಎಎಪಿ ಪಕ್ಷಕ್ಕೆ ಕಾರ್ಯಕರ್ತರು ನೀಡಿದ ಕೊಡುಗೆಯನ್ನು ನಾನು ಎಂದಿಗೂ ಮರೆಯುವುದಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾವು 67 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೆವು. ಈ ಬಾರಿ ಎಲ್ಲಾ 70 ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತೇವೆ" ಎಂದು ಕೇಜ್ರಿವಾಲ್ ಹೇಳಿದ್ದಾರೆ.

We will win all 70 cities in Delhi in Assembly elections: Arvind Kejriwal

ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಕೇಜ್ರಿವಾಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಮಮತಾ ಬ್ಯಾನರ್ಜಿ ಸೇರಿ ಗಣ್ಯರು ಶುಭ ಹಾರೈಸಿದ್ದಾರೆ.

"ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಆಯುರಾರೋಗ್ಯಕ್ಕಾಗಿ ನಾನು ದೇವರಲ್ಲಿ ಬೇಡುತ್ತೇನೆ" ಎಂದು ಟ್ವೀಟ್ ಮಾಡಿ ಶುಭ ಕೋರಿದ್ದಾರೆ ಪ್ರಧಾನಿ ನರೇಂದ್ರ ಮೋದಿ.

ಅದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್, "ನಿಮ್ಮ ಶುಭಹಾರೈಕೆಗೆ ನನ್ನ ಅನಂತ ಧನ್ಯವಾದಗಳು" ಎಂದಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲಾ ಏಳು ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+