Breaking; ದೆಹಲಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ, ಇಲ್ಲವೇ ದಂಡ

ನವದೆಹಲಿ, ಏಪ್ರಿಲ್ 20; ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ಮತ್ತೆ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದರೆ ದಂಡ ಹಾಕುವುದಾಗಿಯೂ ಎಚ್ಚರಿಕೆ ನೀಡಲಾಗಿದೆ.

ಬುಧವಾರ ದೆಹಲಿ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಆದೇಶಿಸಿದೆ. ನಿಯಮ ಉಲ್ಲಂಘನೆ ಮಾಡಿದರೆ 500 ರೂ. ದಂಡ ಹಾಕುವುದಾಗಿಯೂ ಆದೇಶದಲ್ಲಿ ತಿಳಿಸಿದೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವ ನಿಯಮ ಕಡ್ಡಾಯಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆ. ನಗರದಲ್ಲಿನ ಕೋವಿಡ್‌ ಪರಿಸ್ಥಿತಿ ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆದಿದೆ.

Wearing Of Mask Compulsory Again In New Delhi

ದೆಹಲಿ ಲೆಫ್ಟಿನೆಂಟ್ ಗೌವರ್ನರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಲೆಗಳನ್ನು ಮುಚ್ಚುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೆ ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ರೂಪಿಸಲು ಸೂಚನೆ ಕೊಡಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸುವ ಕುರಿತು ಅಧಿಕೃತ ಆದೇಶ ಶೀಘ್ರದಲ್ಲಿಯೇ ಪ್ರಕಟವಾಗಲಿದೆ. ಅಲ್ಲದೇ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳ ಮೇಲೆ ಕಣ್ಗಾವಲು ಇಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಮಂಗಳವಾರ ದೆಹಲಿಯಲ್ಲಿ 632 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾದರೂ ಆಸ್ಪತ್ರೆಗೆ ದಾಖಲಾಗುವವರು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿಲ್ಲ.

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಹಾಕದಿದ್ದರೆ ದಂಡ ಹಾಕುವ ನಿಯಮವನ್ನು ದೆಹಲಿ ಸರ್ಕಾರ ಏಪ್ರಿಲ್ 2ರಂದು ರದ್ದುಗೊಳಿಸಿತ್ತು. ಈಗ ಅಧಿಕಾರಿಗಳು ಕೋವಿಡ್ ಹರಡುವಿಕೆ ತಡೆಗೆ ಮಾಸ್ಕ್ ಹಾಕುವ ನಿಯಮ ಮತ್ತೆ ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಹೇಳಿದ್ದಾರೆ.

ಏಪ್ರಿಲ್ 11 ರಿಂದ 18ರ ತನಕ ದೆಹಲಿಯಲ್ಲಿನ ಪಾಸಿಟಿವಿಟಿ ದರದಲ್ಲಿ ಮೂರು ಪಟ್ಟು ಏರಿಕೆಯಾಗಿದೆ. ಏಪ್ರಿಲ್ 11ರಂದು 2.70 ರಷ್ಟಿದ್ದ ಪಾಸಿಟಿವಿಟಿ ದರ ಏಪ್ರಿಲ್ 18ರಂದು 7.72ಕ್ಕೆ ಏರಿಕೆಯಾಗಿತ್ತು.

ಕಳೆದ ವಾರ ದೆಹಲಿಯಲ್ಲಿ 67,360 ಪರೀಕ್ಷೆಗಳನ್ನು ನಡೆಸಿದಾಗ 2,606 ಹೊಸ ಪ್ರಕರಣ ದಾಖಲಾಗಿತ್ತು. ಹರ್ಯಾಣ ರಾಜ್ಯದಲ್ಲಿ ಸಹ ಈಗಾಗಲೇ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದ್ದು, ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+