ಗೆಲುವಿನ ಶುಭ ಕೋರಿದ ಪ್ರಧಾನಮಂತ್ರಿಗೆ ಕೇಜ್ರಿವಾಲ್ ಉತ್ತರವೇನು?

Recommended Video

      ಕೇಜ್ರಿವಾಲ್ ಗೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ | Aravind Kejriwal | Narendra Modi | Oneindia Kannada

      ನವದೆಹಲಿ, ಫೆಬ್ರವರಿ.11: ರಾಷ್ಟ್ರ ರಾಜಧಾನಿಯಲ್ಲಿ ಮಫ್ಲರ್ ಮ್ಯಾನ್ ಆಡಳಿತಕ್ಕೆ ಮತದಾರರು ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆದಿಯಾಗಿ ಹಲವು ನಾಯಕರು ಶುಭಾಶಯ ಕೋರಿದ್ದಾರೆ.

      ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಆಪ್ ಗೆ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಭಾಶಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ದೆಹಲಿ ಮತದಾರರ ಆಶೋತ್ತರಗಳನ್ನು ಈಡೇರಿಸುವಂತೆ ಆಡಳಿತವನ್ನು ನೀಡಿರಿ ಎಂದು ಪ್ರಧಾನಿ ಸಲಹೆ ನೀಡಿದ್ದಾರೆ.

      ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಧನ್ಯವಾದ ಅರ್ಪಿಸಿದ್ದಾರೆ. ಕೇಂದ್ರ ಸರ್ಕಾರದ ಜೊತೆಗೆ ಉತ್ತಮ ಬಾಂಧ್ಯವವನ್ನು ಇಟ್ಟುಕೊಂಡು ರಾಷ್ಟ್ರ ರಾಜಧಾನಿ ದೆಹಲಿಯನ್ನು ವಿಶ್ವಮಾನ್ಯ ನಗರವನ್ನಾಗಿ ಪರಿವರ್ತಿಸುವ ಧ್ಯೇಯವನ್ನು ಇಟ್ಟುಕೊಂಡಿದ್ದೇನೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

      What Is The CM Arvind Kejriwal Reaction About PM Narendra Modi Tweet

      ಇನ್ನು, ಫೆಬ್ರವರಿ.08ರಂದು ನಡೆದ ವಿಧಾನಸಭಾ ಚುನಾವಣೆ ಫಲಿತಾಂಶವು ಮಂಗಳವಾರ ಹೊರ ಬಿದ್ದಿದ್ದು, ಆಮ್ ಆದ್ಮಿ ಪಕ್ಷವು 70 ವಿಧಾನಸಭಾ ಕ್ಷೇತ್ರಗಳ ಪೈಕಿ 62 ಕ್ಷೇತ್ರಗಳಲ್ಲಿ ಬಹುತೇಕ ಗೆಲುವು ದಾಖಲಿಸಿದೆ. ಇನ್ನು, 8 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ನಗೆ ಬೀದಿದ್ದರೂ, ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಗಿಟ್ಟಿಸುವಲ್ಲಿ ಮತ್ತೊಮ್ಮೆ ಸೋತಿದೆ. ಸತತ ಎರಡನೇ ಬಾರಿಯೂ ಕಾಂಗ್ರೆಸ್ ರಾಷ್ಟ್ರ ರಾಜಧಾನಿಯಲ್ಲಿ ಖಾತೆ ತೆರೆಯುವಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+