ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ಪಡೆದ ಬಳಿಕ ನರ್ಸ್ ನಿವೇದಾಗೆ ಪ್ರಧಾನಿ ಮೋದಿ ಹೇಳಿದ್ದೇನು?

|
Google Oneindia Kannada News

ನವದೆಹಲಿ,ಮಾರ್ಚ್ 1: ಕೊರೊನಾ ಲಸಿಕೆ ಪಡೆದ ಬಳಿಕ ಪ್ರಧಾನಿ ಮೋದಿ ನರ್ಸ್ ನಿವೇದಾಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಪ್ರಧಾನಿ ಮೋದಿ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದರು. ಕೊರೊನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಆರಂಭಿಸಿರುವ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ಮುಂದಿನ ಹಂತದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿ

ಲಸಿಕೆ ಹಾಕಿದ ನರ್ಸ್ ನಿವೇದಾ ಅವರು ಮಾತನಾಡಿ, ಬೆಳಗ್ಗೆ ಹಿರಿಯ ವೈದ್ಯರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಪಡೆಯಲು ಬರುತ್ತಿದ್ದಾರೆ ಎಂದು ತಿಳಿಯಿತು. ನನ್ನನ್ನು ಲಸಿಕೆ ಕೇಂದ್ರಕ್ಕೆ ಲಸಿಕೆ ಹಾಕಲು ನಿಯೋಜಿಸಿದರು. ನಿಜಕ್ಕೂ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದ ಖುಷಿ ನೀಡಿದೆ ಎಂದು ಹೇಳಿದರು.

What PM Modi Told Nurse After Receiving Vaccine

ಇನ್ನು ಲಸಿಕೆ ಪಡೆದ ಬಳಿಕ ಮಾತನಾಡಿದ ಪ್ರಧಾನಿ ಮೋದಿ..ನೀವು ಎಲ್ಲಿಂದ ಬಂದಿದ್ದವರು ಎಂದು ಕೇಳಿದರು.. ಆಗ ನಾವು ಪುದುಚೇರಿಯ ಮೂಲದವರು ಎಂದು ಹೇಳಿದೆವು ಎಂದು ಹೇಳಿದ್ದಾರೆ.

ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿನ ಕೋವಿಡ್ ಲಸಿಕೆ ವಿತರಣಾ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ ತಮ್ಮ ಮೊದಲ ಡೋಸ್ ಪಡೆದರು. ಪುದುಚೆರಿಯ ಸಿಸ್ಟರ್ ಪಿ ನಿವೇದಾ ಅವರು ಭಾರತ್ ಬಯೋಟೆಕ್ ಕಂಪೆನಿ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಲಸಿಕೆಯನ್ನು ಪ್ರಧಾನಿ ಮೋದಿಯವರಿಗೆ ಹಾಕಿದ್ದಾರೆ.

ಲಸಿಕೆ ಹಾಕಿದ ಬಳಿಕ ನರ್ಸ್ ನಿವೇದಿತಾ ಅವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಮಾತನಾಡಿ ಲಸಿಕೆ ಹಾಕಿಬಿಟ್ಟಿರಾ, ಹಾಕಿದ್ದೇ ಗೊತ್ತಾಗಲಿಲ್ಲ, ನನಗೆ ಲಸಿಕೆ ಚುಚ್ಚಿದ್ದೇ ತಿಳಿಯಲಿಲ್ಲ ಎಂದು ಹೇಳಿದರು ಎಂದು ತಿಳಿದುಬಂದಿದೆ.

English summary
Prime Minister Narendra Modi became the first to take a Covid shot today as nationwide vaccination of persons above 60 and those over 45 with illnesses began.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X