ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ಚುನಾವಣೆ: ಬಿಜೆಪಿ ಅಭ್ಯರ್ಥಿ ಯಾರು..?

ವರ್ಷಾರಂಭದಿಂದಲೂ ಒಬ್ಬರಲ್ಲ ಒಬ್ಬರ ಹೆಸರು ರಾಷ್ಟ್ರಪತಿ ಗಾದಿಯಲ್ಲಿ ಕೇಳಿಬಂದಿದೆ. ಆದರೆ ಇದೀಗ ರಾಷ್ಟ್ರಪತಿ ಅಭ್ಯರ್ಥಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮಟ್ಟದಲ್ಲಿ ಮಾತುಕತೆ ನಡೆದಿದೆ.

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಮೇ 26: ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರಾವಧಿ ಇದೇ ಜುಲೈನಲ್ಲಿ ಅಂತ್ಯಗೊಳ್ಳಲಿದ್ದು, ಮುಂದಿನ ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷಗಳು ಬಿರುಸಿನ ಕಾರ್ಯಾಚರಣೆ ನಡೆಸುತ್ತಿವೆ.

ವರ್ಷಾರಂಭದಿಂದಲೂ ಒಬ್ಬರಲ್ಲ ಒಬ್ಬರ ಹೆಸರು ರಾಷ್ಟ್ರಪತಿ ಗಾದಿಯಲ್ಲಿ ಕೇಳಿಬಂದಿದೆ. ಆದರೆ ಇದೀಗ ರಾಷ್ಟ್ರಪತಿ ಅಭ್ಯರ್ಥಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮಟ್ಟದಲ್ಲಿ ಮಾತುಕತೆ ನಡೆದಿದೆ. ಪ್ರಧಾನಿ ಮೋದಿ, ಗೃಹಮಂತ್ರಿ ರಾಜನಾಥ್ ಸಿಂಗ್, ವಿತ್ತಸಚಿವ ಅರುಣ್ ಜೇಟ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಕುರಿತು ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.[ಭಾರತದ ರಾಷ್ಟ್ರಪತಿ ಅಯ್ಕೆ ಮಾಡುವ ಎಲೆಕ್ಟ್ರೋಲ್ ಕಾಲೇಜ್ ಹೇಗಿದೆ?]

Who is s the President candidate of BJP?

ಈ ಸಭೆಯಲ್ಲಿ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ಯಾರಾಗಬೇಕೆಂದು ಗಂಭೀರವಾಗಿ ಚರ್ಚಿಸಲಾಗಿದ್ದು, ಪಕ್ಷದ ಹಿನ್ನೆಲೆಯಿಂದ ಬಂದ, ಹಿರಿಯ, ಅನುಭವಿ ವ್ಯಕ್ತಿಯನ್ನು ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯನ್ನಾಗಿ ಮಾಡುವ ಬಗ್ಗೆ ಮಾತುಕತೆ ನಡೆದಿದೆ. ಯಾವುದೇ ಹೆಸರು ಪ್ರಸ್ತಾಪವಾಗದಿದ್ದರೂ, ವಿಪಕ್ಷಗಳೆಲ್ಲ ಸೇರಿ ಒಮ್ಮತದಿಂದ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿಯವರನ್ನು ರಾಷ್ಟ್ರಪತಿ ಅಭ್ಯರ್ಥಿಯನನಾಗಿ ಆರಿಸುವುದು ಬಹುತೇಕ ಖಚಿತವಾಗಿರುವ ಹಿನ್ನೆಲೆಯಲ್ಲಿ, ಅವರಿಗೆ ಪ್ರಬಲ ಪ್ರತಿಸ್ಪರ್ಧಿಯಾಗುವಂಥ ವ್ಯಕ್ತಿಯನ್ನು ಆರಿಸುವುದು ಬಿಜೆಪಿಗೆ ಅನಿವಾರ್ಯವಾಗಿದೆ.

English summary
To chose a candidate for the next President of India, the BJP leadership has begun preliminary consultations. Prime Minister Narendra Modi discussed the matter with home minister Rajnath Singh, foreign minister Sushma Swaraj, finance minister Arun Jaitley and road transport minister Nitin Gadkari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X