ಮೋದಿಯನ್ನೇಕೆ ಪ್ರಶ್ನಿಸುವುದಿಲ್ಲ: ಮಾಧ್ಯಮದವರಿಗೆ ರಾಹುಲ್ ಪ್ರಶ್ನೆ
ನೀವು ಕೇಳುವ ಎಷ್ಟೊಂದು ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ. ಆದರೆ ನೀವೇಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನೆ ಮಾಡುವುದಿಲ್ಲ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಾಧ್ಯಮದವರನ್ನು ಪ್ರಶ್ನೆ ಮಾಡುವ ಮೂಲಕ ಅಚ್ಚರಿಗೆ ದೂಡಿದ್ದಾರೆ. ಅಷ್ಟಕ್ಕೂ ರಾಹುಲ್ ಗಾಂಧಿಯವರು ಮಾಧ್ಯಮದವರನ್ನು ಕೇಳಿದ್ದು ಏನು ಗೊತ್ತೆ?
ರಫೇಲ್ ವಿಚಾರದಲ್ಲಿ ಒಬ್ಬ ವರ್ತಕರಿಗೆ ಅನುಕೂಲ ಮಾಡಿಕೊಡುವ ಕಾರಣಕ್ಕೆ ಇಡೀ ಒಪ್ಪಂದದಲ್ಲಿ ಬದಲಾವಣೆ ಮಾಡಿದ್ದಾರೆ. ಆ ಬಗ್ಗೆ ನೀವೇಕೆ ಪ್ರಶ್ನೆ ಮಾಡುವುದಿಲ್ಲ? ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮಗ ಜಯ್ ಶಾ ಕಂಪನಿಯ ಬಗ್ಗೆ ನೀವೇಕೆ ಪ್ರಶ್ನಿಸುವುದಿಲ್ಲ? ಈ ಎಲ್ಲ ಪ್ರಶ್ನೆಗಳನ್ನು ನಾನು ನಿಮ್ಮನ್ನು ಕೇಳುತ್ತಿದ್ದೇನೆ ಎಂದಿದ್ದಾರೆ.

ದೆಹಲಿಯಲ್ಲಿ ಬುಧವಾರದಂದು ರಾಹುಲ್ ಗಾಂಧಿ ಅವರು ಅಖಿಲ ಭಾರತ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ನ ಪದಾಧಿಕಾರಿಗಳ ಜತೆ ಸಂವಾದ ನಡೆಸಿದರು. ಈಚೆಗೆ ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವ ರಾಹುಲ್ ಗಾಂಧಿ ಅವರು ಕೇಂದ್ರ ಸರಕಾರ ಹಾಗೂ ನರೇಂದ್ರ ಮೋದಿ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.












Click it and Unblock the Notifications