ಹೆಂಡತಿಗೆ ಕೊರೊನಾ ಪಾಸಿಟಿವ್: ಆತ್ಮಹತ್ಯೆ ಮಾಡಿಕೊಂಡ ಗಂಡ
ನವದೆಹಲಿ, ಏಪ್ರಿಲ್ 30: ಪತ್ನಿಗೆ ಕೊರೊನಾ ವೈರಸ್ ದೃಢವಾಗಿದೆ ಎಂದು ಆಕೆಯ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ಆಚಾರ್ಯ ಪುರಿ ಕಾಲೋನಿಯ 53 ವರ್ಷದ ವ್ಯಕ್ತಿ ಇಂದು ನೇಣಿಗೆ ಶರಣಾಗಿದ್ದಾನೆ. ''ತಮ್ಮ ತಾಯಿಗೆ ಕೊರೊನಾ ವೈರಸ್ ಸೋಂಕು ತಗುಲಿದ ದಿನದಿಂದ ತಂದೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ'' ಎಂದು ಮೃತನ ಮಗ ಪೊಲೀಸರಿಗೆ ತಿಳಿಸಿದ್ದಾರೆ.
ಮೃತನ ಪತ್ನಿ ನಾಲ್ಕು ದಿನಗಳ ಹಿಂದೆ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ನಂತರ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢವಾಗಿತ್ತು. ಈ ವಿಷಯ ತಿಳಿದಾಗಿನಿಂದ ಪತ್ನಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಮನೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತನ ಮಗನ ಹೇಳಿಕೆ ತೆಗೆದುಕೊಂಡಿದ್ದಾರೆ. ಇಡೀ ಕಾಲೋನಿಯನ್ನು ಸೋಂಕಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಸದ್ಯಕ್ಕೆ ವರದಿಗಳ ಪ್ರಕಾರ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಎಂದು ತಿಳಿದು ಬಂದಿದ್ದು, ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3439ಕ್ಕೆ ಏರಿಕೆಯಾಗಿದೆ. 56 ಮಂದಿ ಮರಣ ಹೊಂದಿದ್ದಾರೆ. 1092 ಜನರು ಗುಣಮುಖರಾಗಿದ್ದಾರೆ.












Click it and Unblock the Notifications