ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವೀಣ್ ಕೊಲೆ: ಪಿಎಫ್ಐ ಬ್ಯಾನ್ ಬಗ್ಗೆ ಕೇಂದ್ರದ ಜೊತೆ ಚರ್ಚೆ- ಜೋಶಿ

|
Google Oneindia Kannada News

ನವದೆಹಲಿ ಜುಲೈ 28: ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಬ್ಯಾನ್ ಮಾಡುವ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.

ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಂಘಟನೆಯನ್ನು ಬ್ಯಾನ್ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ಮಾಡಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿಂದೆ ಪಿಎಫ್ಐ ಸಂಘಟನೆ ಕೈವಾಡ ಇರುವ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದರು.

ಆತ್ಮಸಾಕ್ಷಿಗೊಪ್ಪಿ ಸಾಧನಾ ಸಮಾವೇಶ ರದ್ದು: ಸಿಎಂ ಬಸವರಾಜ ಬೊಮ್ಮಾಯಿ ಆತ್ಮಸಾಕ್ಷಿಗೊಪ್ಪಿ ಸಾಧನಾ ಸಮಾವೇಶ ರದ್ದು: ಸಿಎಂ ಬಸವರಾಜ ಬೊಮ್ಮಾಯಿ

ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾದ ಅಗತ್ಯ ಎದುರಾಗಿದೆ. ಇಂಥಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಮುಖ್ಯಮಂದಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನೊಂದಿಗೆ ಚರ್ಚೆಯಲ್ಲಿ ಪ್ರಸ್ತಾಪಿಸಿದರು ಎಂದರು.

 Will Discus with Central Ministry On PFI Ban, Says Pralhad Joshi

ಪ್ರವೀಣ್ ನೆಟ್ಟಾರು ಕೊಲೆಯಲ್ಲಿ ಪಿಎಫ್ಐ, ಎಸ್‌ಡಿಪಿಐ ಕೈವಾಡ ಶಂಕೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದಲ್ಲಿ ಪಿಎಫ್,ಐ, ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ಸದಸ್ಯರ ಕೈವಾಡ ಇರುವ ಬಗ್ಗೆ ಅನುಮಾನಗಳು ಕೇಳಿ ಬಂದಿವೆ. ಈ ಸಂಘಟನೆಗಳ ಕೈವಾಡ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂಥಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದರು.

 Will Discus with Central Ministry On PFI Ban, Says Pralhad Joshi

ಕರ್ನಾಟದಲ್ಲಿ ಸರಣಿ ಹತ್ಯೆಗಳು ನಡೆದಿವೆ. ಈ ಸಂಬಂಧ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತಿವಾಗಿದೆ. ಈಕಾರಣಕ್ಕೆ ಕೃತ್ಯಗಳ ಹಿಂದೆ ಅನುಮಾನ ಇರುವ ಅನುಮಾನ ಪಿಎಫ್ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚೆಸುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಅವರು ಹೇಳಿದರು.

English summary
We and CM Basavaraja Bommai will discuss with Central home affairs about PFI Ban, says Union Parliamentary Affairs minister Pralhad Joshi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X