ಬಿಜೆಪಿ ಮೊದಲ ಪಟ್ಟಿಯಲ್ಲಿ ಮೋದಿ, ರಾಜನಾಥ್ ಸಿಂಗ್ ಹೆಸರು?

ನವದೆಹಲಿ, ಮಾರ್ಚ್ 16: ಲೋಕಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಶನಿವಾರ ಸಂಜೆ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಅವರ ಹೆಸರೂ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸುಮಾರು 100 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗುತ್ತಿದ್ದು, ಈ ಪಟ್ಟಿಯಲ್ಲಿ ಉತ್ತರ ಪ್ರದೇಶದ 20 ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗಲಿದೆ.

ಅಪರಾಹ್ನ 4 ಗಂಟೆಗೆ ಸಭೆ ಆರಂಭವಾಗಲಿದ್ದು, ಸಭೆಯ ನಂತರ ಪಟ್ಟ ಬಿಡುಗಡೆಯಾಗಲಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

Will there be PM Modi and Rajnath Sing name in BJPs 1st list for LS Polls?

ಸಭೆಯಲ್ಲಿ ಪಕ್ಷಾಧ್ಯಕ್ಷ ಅಮಿತ್ ಶಾ, ಜೊತೆಗೆ ಬಿಜೆಪಿ ಹಿರಿಯ ಮುಖಂಡರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ನಿರ್ಮಲಾ ಸೀತಾರಾಮನ್ ಮುಂತಾದವರು ಭಾಗಿಯಾಗಲಿದ್ದಾರೆ.

ಲೋಕಸಭೆಗೆ ಏಪ್ರಿಲ್ 11 ರಿಂದ ಚುನಾವನೆ ಆರಂಭವಾಗಲಿದ್ದು, ಏಳು ಹಂತಗಳಲ್ಲಿ ನಡೆದು ಮೇ 23 ರಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+