ಕೊವಿಡ್ 19: ದೆಹಲಿಯಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಮಂದಿ ಸಾವು

ನವದೆಹಲಿ, ನವೆಂಬರ್ 13: ದೆಹಲಿಯಲ್ಲಿ ಕೊರೊನಾ ಸೋಂಕು ತೀವ್ರವಾಗುತ್ತಿದೆ. ಗುರುವಾರ ಒಂದೇ ದಿನದಲ್ಲಿ 104 ಮಂದಿ ಮೃತಪಟ್ಟಿದ್ದಾರೆ. ನಿನ್ನೆ 7053 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಜೂನ್ 16ರಂದು ದೆಹಲಿಯಲ್ಲಿ 93 ಮಂದಿ ಮೃತಪಟ್ಟಿದ್ದರು, ಅದಾದ ಬಳಿಕ ಸಾವಿನ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಕೊರೊನಾ ಮೂರನೇ ಅಲೆ ಶುರುವಾಗಿದ್ದು, ಒಂದೇ ದಿನದಲ್ಲಿ 104 ಮಂದಿಯ ಪ್ರಾಣವನ್ನು ಕಸಿದುಕೊಂಡಿದೆ.

ದೆಹಲಿಯಲ್ಲಿ ಒಟ್ಟು 4,67,028 ಕೊರೊನಾ ಸೋಂಕಿತರಿದ್ದಾರೆ. 4.16 ಲಕ್ಷ ಮಂದಿ ಗುಣಮುಖರಾಗಿದ್ದಾರೆ.ದೆಹಲಿಯಲ್ಲಿ ಚಳಿಗಾಲದ ಸಮಯದಲ್ಲಿ ದಿನಕ್ಕೆ 15 ಸಾವಿರ ಪ್ರಕರಣಗಳು ಪತ್ತೆಯಾಗಬಹುದು ಎಂದು ಅಂದಾಜಿಸಲಾಗಿದೆ. ದೆಹಲಿಯಲ್ಲಿ ವಾಯುಗುಣಮಟ್ಟ ಕೆಟ್ಟದಾಗಿದ್ದು, ಉಸಿರಾಟದ ಸಮಸ್ಯೆಗಳು ತೀವ್ರವಾಗಿವೆ. ಹೀಗಾಗಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ.

With 104 Deaths, Highest Number Of Covid Fatalities In A Day In Delhi

ನಿತ್ಯ ಆರ್‌ಟಿ ಪಿಸಿಆರ್ ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಗುರುವಾರ 47,905 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. 1,28,121 ಮಂದಿ ಸಾವನ್ನಪ್ಪಿದ್ದಾರೆ.

ನವದೆಹಲಿಯಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ಶುರುವಾಗಿದೆ.ಪ್ರತಿ ನಾಲ್ವರಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಸೆರೋ ಸಮೀಕ್ಷೆಯ ವರದಿಯಲ್ಲಿ ತಿಳಿದುಬಂದಿದೆ.

ದೆಹಲಿಯಲ್ಲಿ ನಿತ್ಯ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಪರೀಕ್ಷೆ ನಡೆಸಿದ ಕೇವಲ 25ರಷ್ಟು ಮಂದಿಯಲ್ಲಿ ಮಾತ್ರ ಪ್ರತಿಕಾಯಗಳು ಪತ್ತೆಯಾಗಿವೆ.

ಯಾವುದೇ ಮನೆಯನ್ನು ಕೊರೊನಾ ಸೋಂಕು ಪ್ರವೇಶಿಸಿಲ್ಲ ಎನ್ನುವ ಮನೆಗಳೇ ಇಲ್ಲ, ಯಾವ ಮನೆಯನ್ನೂ ಬಿಟ್ಟಿಲ್ಲ, ಕೊರೊನಾ ಲಾಕ್‌ಡೌನ್ ಸಡಿಲಗೊಳಿಸಿದ ಬಳಿಕ ಮತ್ತಷ್ಟು ಸೋಂಕು ಹೆಚ್ಚಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+