ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೆಟ್ರೋ ಹಳಿಗೆ ಹಾರಿ ಮಹಿಳೆ ಆತ್ಮಹತ್ಯೆ: ಸೇವೆಯಲ್ಲಿ ವ್ಯತ್ಯಯ

|
Google Oneindia Kannada News

Recommended Video

ಮೆಟ್ರೋ ಹಳಿಗೆ ಹಾರಿ ಮಹಿಳೆ ಆತ್ಮಹತ್ಯೆ | Oneindia Kannada

ನವದೆಹಲಿ, ಸೆಪ್ಟೆಂಬರ್ 16: ದೆಹಲಿಯ ಮೆಟ್ರೋ ಹಳಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಟಿಬಿ ನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಆಯಿಷಾ ಖಾನ್ ಎಂದು ಗುರುತಿಸಲಾಗಿದೆ. ಅವರು ಬೆಳಗಿನ ಜಾವ 2 ಗಂಟೆ ಹೊತ್ತಿಗೆ ಜಿಟಿಬಿ ನಗರ ಮೆಟರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿದ್ದಾರೆ. ಆಜಾದ್‌ಪುರ ಮೆಟ್ರೋ ನಿಲ್ದಾಣಕ್ಕೆ ಬೆಳಗ್ಗೆ 8.45 ಸುಮಾರಿಗೆ ಮಾಹಿತಿ ಬಂದಿದೆ.

ಮೆಟ್ರೋ ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ ರೀಚಾರ್ಜ್ ಹೀಗೂ ಮಾಡಬಹುದುಮೆಟ್ರೋ ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ ರೀಚಾರ್ಜ್ ಹೀಗೂ ಮಾಡಬಹುದು

ಆಯಿಷಾ ಖಾನ್ ನವದೆಹಲಿಯಲ್ಲಿರುವ ಶಕ್ತಿ ನಗರ ನಿವಾಸಿಯಾಗಿದ್ದು, ಹಿಂದು ರಾವ್ ಆಸ್ಪತ್ರೆಗೆ ಕರೆತರಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಸ್ಪಷ್ಟಪಡಿಸಿದ್ದಾರೆ.

Woman Commits Suicide At GTB Nagar Metro Station Newdelhi

ಡಿಎಂಆರ್‌ಸಿ ಟ್ವೀಟ್ ಮಾಡಿದ್ದು ಸಮಯ್‌ಪುರ ಬದ್ಲಿ ಹಾಗೂ ವಿಶ್ವವಿದ್ಯಾಲಯ ಯೆಲ್ಲೋ ಮಾರ್ಗದಲ್ಲಿ ಮೆಟ್ರೋ ನಿಧಾನವಾಗಲಿದೆ ಎಂದು ತಿಳಿಸಿದೆ. ಆದರೆ ಮಹಿಳೆ ಶವದ ಪಕ್ಕ ಡೆತ್ ನೋಟ್ ಇರಲಿಲ್ಲ, ಪರ್ಸ್‌ನಲ್ಲಿ ಒಂದು ಮೊಬೈಲ್ ನಂಬರ್ ಮಾತ್ರ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 11 ರಂದು, ಮೆಟ್ರೊದಲ್ಲಿ ಅದೇ ಮಾರ್ಗದಲ್ಲಿ ಟ್ರ್ಯಾಕ್ನಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು.. ಘಟನೆಯ ನಂತರ, ಸಮೈಪುರ್ ಬದ್ಲಿ ಮತ್ತು ವಿಶ್ವವಿದ್ಯಾಲಯ ನಿಲ್ದಾಣದ ನಡುವಿನ ಸಂಚಾರಕ್ಕೆ ತೊಂದರೆಯಾಯಿತು.

ನಮ್ಮ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನನಮ್ಮ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ

ಕಳೆದ ಏಳು ತಿಂಗಳಲ್ಲಿ ಮೆಟ್ರೋ ಟ್ರ್ಯಾಕ್‌ನಲ್ಲಿ ಹಾರಿ ಮೃತಪಟ್ಟವರ ಸಂಖ್ಯೆ 41 ಕ್ಕೆ ತಲುಪಿದೆ.ಡಿಎಂಆರ್‌ಸಿಯ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಇಂತಹ ಘಟನೆಗಳನ್ನು ನಿಲ್ಲಿಸಲಾಗುತ್ತಿಲ್ಲ.

ಇಂತಹ ಘಟನೆಗಳನ್ನು ತಡೆಯುವ ಸಲುವಾಗಿ ಡಿಎಂಆರ್‌ಸಿ ಅಭಿಯಾನವನ್ನು ಪ್ರಾರಂಭಿಸಿದೆ. ವಾಸ್ತವವಾಗಿ ಮಾನಸಿಕ ತೊಂದರೆಗಳು ಮತ್ತು ಒಂಟಿತನದಿಂದ ಹೋರಾಡುವ ಜನರಿಗಾಗಿ ಈ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ಮೆಟ್ರೊದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳಲ್ಲಿ ಹೆಚ್ಚಿನವರು ಮಾನಸಿಕ ತೊಂದರೆಗಳಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

English summary
Woman Commits Suicide At GTB Nagar Metro Station Newdelhi, A section of Delhi Metro's Yellow line was affected on Monday morning after a body was found on the tracks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X