ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳಕೆದಾರರಿಗೆ ಹೊಸ ನಿಯಮವನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವುದಿಲ್ಲ: ವಾಟ್ಸಾಪ್

|
Google Oneindia Kannada News

ನವದೆಹಲಿ, ಜುಲೈ 09: ಬಳಕೆದಾರರಿಗೆ ನೂತನ ಗೌಪ್ಯತಾ ನಿಯಮವನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವುದಿಲ್ಲ ಎಂದು ವಾಟ್ಸಾಪ್ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ದತ್ತಾಂಶ ಸಂರಕ್ಷಣಾ ಮಸೂದೆ ಜಾರಿಗೆ ಬರುವವರೆಗೂ ಹೊಸ ಗೌಪ್ಯತೆ ನೀತಿಯನ್ನು ಒಪ್ಪಿಕೊಳ್ಳುವಂತೆ ಬಳಕೆದಾರರನ್ನು ಒತ್ತಾಯಿಸುವುದಿಲ್ಲ ಎಂದು ಹೇಳಿದೆ.

 ವಾಟ್ಸಾಪ್ ಒತ್ತಾಯ ಪೂರ್ವಕವಾಗಿ ಬಳಕೆದಾರರ ಅನುಮತಿ ಪಡೆಯುತ್ತಿದೆ: ಕೇಂದ್ರ ವಾಟ್ಸಾಪ್ ಒತ್ತಾಯ ಪೂರ್ವಕವಾಗಿ ಬಳಕೆದಾರರ ಅನುಮತಿ ಪಡೆಯುತ್ತಿದೆ: ಕೇಂದ್ರ

ವಾಟ್ಸಾಪ್ ಪರ ನ್ಯಾಯಾಲಯಕ್ಕೆ ಮಾಹಿತಿ ನೀಡಿರುವ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು, ಹೊಸ ನೀತಿಯನ್ನು ತಡೆ ಹಿಡಿಯಲು ನಿರ್ಧರಿಸಲಾಗಿದ್ದು, ಯಾವುದೇ ಬಳಕೆದಾರರೂ ಹೊಸ ಗೌಪ್ಯತಾ ನೀತಿಯನ್ನು ಒಪ್ಪಿಕೊಳ್ಳುವಂತೆ ನಾವು ಒತ್ತಾಯಿಸುವುದಿಲ್ಲ. ಆದಾಗ್ಯೂ ವಾಟ್ಸಾಪ್ ತನ್ನ ಬಳಕೆದಾರರಿಗೆ ನವೀಕರಣ (ಅಪ್ಡೇಟ್) ವನ್ನು ಪ್ರದರ್ಶಿಸುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ.

Wont Compel Users To Accept New Privacy Policy, WhatsApp Tells Delhi HC

ಇದೇ ವೇಳೆ ಹೊಸ ಗೌಪ್ಯತೆ ನೀತಿಯನ್ನು ಒಪ್ಪಿಕೊಳ್ಳದವರ ವಾಟ್ಸಾಪ್ ಬಳಕೆಯನ್ನು ಮಿತಿಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯ ಬಗ್ಗೆ ತನಿಖೆ ನಡೆಸುವಂತೆ ಭಾರತದ ಸ್ಪರ್ಧಾ ಆಯೋಗ ಸಿಸಿಐ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಫೇಸ್‌ಬುಕ್ ಮತ್ತು ವಾಟ್ಸಾಪ್ ದೆಹಲಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ಪೀಠ ಇಂದು ವಿಚಾರಣೆ ನಡೆಸಿತು. ಈ ವೇಳೆ ಫೇಸ್‌ಬುಕ್ ಒಡೆತನದ ವಾಟ್ಸಾಪ್ ಇಂದು ಹೇಳಿಕೆ ನೀಡಿದ್ದು, ದತ್ತಾಂಶ ಸಂರಕ್ಷಣಾ ಮಸೂದೆ ಜಾರಿಗೆ ಬರುವವರೆಗೂ ಹೊಸ ಗೌಪ್ಯತೆ ನೀತಿಯನ್ನು ಒಪ್ಪಿಕೊಳ್ಳುವಂತೆ ಬಳಕೆದಾರರನ್ನು ಒತ್ತಾಯಿಸುವುದಿಲ್ಲ ಎಂದು ಹೇಳಿದೆ.

English summary
Whatsapp told the Delhi High Court on Friday that till the data protection bill comes into force, it would not compel users to opt for its new privacy policy as it has been put on hold.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X