ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಯಶವಂತ್ ಸಿನ್ಹಾ

Posted By:
Subscribe to Oneindia Kannada

ನವದೆಹಲಿ, ಏಪ್ರಿಲ್ 17: ಕೇಂದ್ರ ಮೋದಿ ಸರ್ಕಾರದ ಮೇಲೆ ಪದೇ ಪದೇ ದಾಳಿ ನಡೆಸುತ್ತಲೇ ಇರುವ ಬಿಜೆಪಿ ನಾಯಕ ಯಶವಂತ್ ಸಿನ್ಹಾ, ಇತ್ತೀಚೆಗೆ ಪತ್ರಿಕೆಯೊಂದಕ್ಕೆ ಬರೆದ ಲೇಖನದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಬಿಜೆಪಿ ಮುಖಂಡ ಯಶವಂತ ಸಿನ್ಹಾರಿಂದ 'ರಾಷ್ಟಮಂಚ್' ಸ್ಥಾಪನೆ

ಮಹಿಳಾ ಸುರಕ್ಷತೆ, ಆರ್ಥಿಕ ಸ್ಥಿತಿ ಮತ್ತು ವಿದೇಶಿ ನೀತಿ ಮುಂತಾದವುಗಳನ್ನು ನಿರ್ವಹಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ. ವಿಶ್ವದಲ್ಲೇ ಅತ್ಯಂತ ಶೀಘ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶ ಭಾರತ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದು ಸುಳ್ಳು ಎಂದು ಅವರು ಬರೆದಿದ್ದಾರೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಅತ್ಯಾಚಾರ ಪ್ರಕರಣಗಳು ಇತ್ತೀಚೆಗೆ ಮಾಮೂಲೆನ್ನಿಸಿವೆ. ಇಂಥ ಕೃತ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರೇ ಶಾಮೀಲಾಗಿರುವುದು ಆತಂಕದ ವಿಚಾರ. ಮೋದಿ ವಿದೇಶಿ ಅತಿಥಿಗಳನ್ನು ಅಪ್ಪಿಕೊಳ್ಳುವುದಷ್ಟಕ್ಕೇ ವಿದೇಶಿ ನೀತಿ ಸೀಮಿತವಾಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ.

Yashwant Sinha attacks Modi government again

ಅಷ್ಟೇ ಅಲ್ಲ, ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಸಂಪೂರ್ಣ ನಾಶವಾಗಿದೆ. ಪಕ್ಷದ ಸದಸ್ಯರೊಂದಿಗೆ ಚರ್ಚಿಸುವುದಕ್ಕೆ ಮೋದಿಯವರಿಗೆ ಸಮಯವಿಲ್ಲ ಎಂದು ಅವರು ಟೀಕಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Senior BJP leader and former union minister Yashwant Sinha dismissed the Central government’s claims of India being the world’s fastest growing economy, he pointed that rapes had become the order of the day, pointing that even BJP workers were involved in such crimes

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ