• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯವನ್ನು ನಂ.1 ಆಗಿಸೋಣ: ರಾಜ್ಯ ಸಂಸದರಿಗೆ ಹುರುಪು ತುಂಬಿದ ಯಡಿಯೂರಪ್ಪ

|

ನವದೆಹಲಿ, ಆಗಸ್ಟ್ 07 : ಕರ್ನಾಟಕವನ್ನು ದೇಶಕ್ಕೇ ನಂ. 1 ರಾಜ್ಯವನ್ನಾಗಿ ಮಾಡಲು ಕೇಂದ್ರದಿಂದ ಹೆಚ್ಚು ಹೆಚ್ಚಾಗಿ ನೆರವು ಪಡೆಯಲು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು, ಸಂಸತ್ ಸದಸ್ಯರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.

ನವದೆಹಲಿಯಲ್ಲಿ ಮಂಗಳವಾರದಂದು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು, ಸಂಸತ್ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಮೂರು ದಿನ ವಾಸ್ತವ್ಯ: ಯಡಿಯೂರಪ್ಪ

"ಕೇಂದ್ರದಿಂದ ನಮ್ಮ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಬೆಂಬಲ ಪಡೆಯುವಲ್ಲಿ ನಿಮ್ಮೆಲ್ಲರ ಸಹಕಾರವನ್ನು ನಿರೀಕ್ಷಿಸುತ್ತಿದ್ದೇನೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳ ನಡುವಣ ಬಾಂಧವ್ಯ ಮಹತ್ವಪೂರ್ಣವಾದುದು. ಸಂಸತ್ತಿನಲ್ಲಿ ನಮ್ಮ ರಾಜ್ಯದ ನೆಲ, ಜಲ, ಭಾಷೆಯ ವಿಷಯದಲ್ಲಿ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವುದು ಇಂದು ಅತಿ ಅಗತ್ಯವಾಗಿದೆ" ಎಂದರು.

ಮೂರು ದಿನಗಳ ನವದೆಹಲಿ ಭೇಟಿಯ ಅವಧಿಯಲ್ಲಿ ರಾಜ್ಯದ ವಿವಿಧ ಅಭಿವೃದ್ಧಿ ವಿಚಾರಗಳು ಹಾಗೂ ಕೇಂದ್ರ ಸರ್ಕಾರದಲ್ಲಿ ಬಾಕಿ ಇರುವ ಹಲವು ಪ್ರಸ್ತಾವನೆಗಳಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಹಲವು ಸಚಿವರನ್ನು ಇಂದು ಭೇಟಿಯಾಗಿ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಯಡಿಯೂರಪ್ಪ ಸರಕಾರಕ್ಕೂ ಮಳೆಗೂ ಯಾಕಿಷ್ಟು ವಿಶೇಷ ನಂಟು?

ಬಹಳ ದಿನಗಳಿಂದ ಬಾಕಿ ಇರುವ ಕನಿಷ್ಠ ಬೆಂಬಲ ಬೆಲೆಯ ಕೇಂದ್ರದ ಪಾಲಿನ ಅನುದಾನ, ಕಲ್ಲಿದ್ದಲು ಬ್ಲಾಕ್‍ಗಳ ಹಂಚಿಕೆ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಬಾಕಿ ಅನುದಾನ, ಹೀಗೆ ಹಲವಾರು ವಿಷಯಗಳ ಕುರಿತು ಕೇಂದ್ರದ ಸಚಿವರುಗಳ ಗಮನ ಸೆಳೆಯಲಾಗಿದೆ.

ರಾಜ್ಯದಲ್ಲಿ ಹಲವೆಡೆ ಬರದ ಛಾಯೆ ಇದ್ದು, ಉತ್ತರ ಕರ್ನಾಟಕದಲ್ಲಿ ಕೃಷ್ಣಾನದಿಯಲ್ಲಿ ಪ್ರವಾಹ ಉಂಟಾಗಿ 5 ಜಿಲ್ಲೆಗಳಲ್ಲಿ ಜನ ತೊಂದರೆಗೀಡಾಗಿದ್ದಾರೆ. ರಾಜ್ಯವು ವಿಪತ್ತು ನಿರ್ವಹಣೆಗೆ ಸಂಪೂರ್ಣವಾಗಿ ಸನ್ನದ್ಧವಾಗಿದೆ. ಸಂಕಷ್ಟಕ್ಕೆ ಒಳಗಾದ ಜನರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಪಡೆಯುವಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು, ಸಂಸತ್ ಸದಸ್ಯರ ಸಹಕಾರವೂ ಅಗತ್ಯ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮ್, ಸುರೇಶ್ ಅಂಗಡಿ, ಡಿವಿ.ಸದಾನಂದಗೌಡ, ಪ್ರಹ್ಲಾದ್ ಜೋಷಿ ಮತ್ತಿತರೆ ಸಚಿವರುಗಳು, ಸಂಸದರು ಅಗತ್ಯ ಸಲಹೆಗಳನ್ನು ಈ ಸಂದರ್ಭದಲ್ಲಿ ನೀಡಿದರು.

English summary
CM Yeddyurappa had meeting with Karnataka all party MPs in New Delhi. He instructed MPs to bring grants from central government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X