ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದ ಇಬ್ಬರಲ್ಲಿ ಮತ್ತೆ ಕೊರೊನಾ ಸೋಂಕು
ನೊಯ್ಡಾ, ಏಪ್ರಿಲ್ 14: ನೊಯ್ಡಾದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದ ಇಬ್ಬರಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
Recommended Video
ಮತ್ತೆ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯ ಹೊರವಲಯದಲ್ಲಿರುವ ನೋಯ್ಡಾದಲ್ಲಿ ನಡೆದ ಘಟನೆಯಿಂದ ಇಡೀ ದೇಶಾದ್ಯಂತ ಆತಂಕ ಉಂಟಾಗಿದೆ.
ಕೊರೊನಾ ಸೋಂಕಿನಿಂದ ಇವರು ಗುಣಮುಖರಾಗಿದ್ದಾರೆಂದು ಖಚಿತಪಡಿಸಿಕೊಳ್ಳಲು 24 ಗಂಟೆಗಳ ಅವಧಿಯಲ್ಲಿ ಎರಡು ಬಾರಿ ತಪಾಸಣೆ ಮಾಡಲಾಗಿತ್ತು. ಎರಡೂ ಟೆಸ್ಟ್‌ನಲ್ಲಿ ನೆಗೆಟಿವ್ ಬಂದಿತ್ತು. ನಂತರ ಮತ್ತೊಂದು ಸ್ವಾಬ್ ಸಂಗ್ರಹಿಸಿ ಡಿಸ್‌ಚಾರ್ಜ್ ಮಾಡಲಾಗಿತ್ತು.
{image-corona-1586830999.jpg kannada.oneindia.com
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿರುವ ರಾಜ್ಯಗಳಲ್ಲಿ ಉತ್ತರ ಪ್ರದೇಶವೂ ಕೂಡಾ ಒಂದಾಗಿದೆ. ಇಲ್ಲಿನ ಗೌತಮ ಬುದ್ಧ ಜಿಲ್ಲೆಯಲ್ಲಿದೆ ನೊಯ್ಡಾ ಇದೆ.
ಅದನ್ನು ಪರೀಕ್ಷಿಸಿದಾಗ ಪಾಸಿಟಿವ್ ಬಂದಿದೆ. ಹೀಗಾಗಿ ಇಬ್ಬರನ್ನೂ ಸೋಮವಾರ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪರಿಶೀಲಿಸಿದ ಬಳಿಕ ಈ ಕುರಿತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಹೊಸದಾಗಿ 356 ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1510ಕ್ಕೆ ಏರಿಕೆಯಾಗಿದೆ.












Click it and Unblock the Notifications