ಗ್ರೇಟರ್ ನೋಯ್ಡಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರ ಸಾವು
ಗ್ರೇಟರ್ ನೋಯ್ಡಾ, ಜುಲೈ 18: ನಿರ್ಮಾಣ ಹಂತದ ಎರಡು ಕಟ್ಟಡಗಳು ಕುಸಿದ ಪರಿಣಾಮ 3 ಜನ ಮೃತರಾದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಗ್ರೇಟರ್ ನೋಯ್ಡಾದ ಶಾಹ್ ಬೆರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಟ್ಟಡದ ಅವಶೇಷದಡಿಯಲ್ಲಿ ಮತ್ತಷ್ಟು ಜನ ಸಿಲುಕಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಹಲವರನ್ನು ಈಗಾಗಲೇ ರಕ್ಷಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಷ್ಟ್ರೀಯ ವಿಪತ್ತು ನಿಯಂತ್ರಣ ದಳದ ನೆರವು ಕೇಳಿದ್ದಾರೆ. ಘಟನೆ ಬಗ್ಗೆ ವಿವರ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಸೂಚನೆ ಸಹ ನೀಡಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸವನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತರಾಗಿದ್ದರು. 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.












Click it and Unblock the Notifications