ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
ನೋಯ್ಡಾ (ಉತ್ತರ ಪ್ರದೇಶ), ನವೆಂಬರ್ 16 : ನೋಯ್ಡಾದ ಟಿಗ್ರಿ ಗ್ರಾಮದ ಭಾರತೀಯ ಜನತಾಪಕ್ಷ (ಬಿಜೆಪಿ)ದ ಮುಖಂಡ ಶಿವಕುಮಾರ್ ಎನ್ನುವರನ್ನು ದುಷ್ಕರ್ಮಿಗಳು ಗುರುವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ನೋಯ್ಡಾದ ಹೈಬತ್ ಪುರದ ಶಿಕ್ಷಣ ಸಂಸ್ಥೆಯ ಮಾಲೀಕರಾಗಿರುವ ಶಿವಕುಮಾರ್ ತಮ್ಮ ಫಾರ್ಚೂನರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಶಿವಕುಮಾರ್ ಮತ್ತು ಭದ್ರತಾ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications