ಗ್ರೇಟರ್ ನೋಯ್ಡಾದಲ್ಲಿ ಕಟ್ಟಡ ಕುಸಿತ: ಸಾವಿನ ಸಂಖ್ಯೆ 9 ಕ್ಕೆ ಏರಿಕೆ

ಗ್ರೇಟರ್ ನೋಯ್ಡಾ, ಜುಲೈ 19: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಿರ್ಮಾಣ ಹಂತದ ಎರಡು ಕಟ್ಟಡಗಳು ಕುಸಿದ ಪರಿಣಾಮ ಸಾವಿಗೀಡಾದವರ ಸಂಖ್ಯೆ 9 ಕ್ಕೇರಿದೆ.

ಗ್ರೇಟರ್ ನೋಯ್ಡಾದ ಶಾಹ್ ಬೆರಿ ಗ್ರಾಮದಲ್ಲಿ ಜುಲೈ 17 ರಂದು ಘಟನೆ ನಡೆದಿದ್ದು, ಕಟ್ಟಡದ ಅವಶೇಷದಡಿಯಲ್ಲಿ ಮತ್ತಷ್ಟು ಜನ ಸಿಲುಕಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಹಲವರನ್ನು ಈಗಾಗಲೇ ರಕ್ಷಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಘಟನೆ ಬಗ್ಗೆ ಸಂಪೂರ್ಣ ವಿವರ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಅವರು ಸೂಚನೆ ನೀಡಿದ್ದಾರೆ.

Greate Noida building collapse: Many bobies recovered

ಕಳೆದ ಫೆಬ್ರವರಿಯಲ್ಲಿ ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸವನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತರಾಗಿದ್ದರು. 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+