4 ನೇ ಮಹಡಿಯಿಂದ ಬಿದ್ದು ನೋಯ್ಡಾದಲ್ಲಿ ಪತ್ರಕರ್ತೆಯ ಸಾವು
ನೋಯ್ಡಾ, ಡಿಸೆಂಬರ್ 15: ತನ್ನ ಅಪಾರ್ಟ್ ಮೆಂಟಿನ ನಾಲ್ಕನೇ ಮಹಡಿಯಿಂದ ಬಿದ್ದು ಪತ್ರಕರ್ತೆಯೊಬ್ಬರು ಮೃತರಾದ ಘಟನೆ ನೋಯ್ಡಾದಲ್ಲಿ ನಡೆದಿದೆ.
ರಾಜಸ್ಥಾನ ಮೂಲದ ರಾಧಿಕಾ ಕೌಶಿಕ್ ಎಂಬ ಮಹಿಳೆ ತಮ್ಮ ಸಹೋದ್ಯೋಗಿಯೊಂದಿಗೆ ತಮ್ಮ ಮನೆಯಲ್ಲೇ ಮದ್ಯ ಸೇವಿಸುತ್ತಿದ್ದರು. ಬೆಳಗ್ಗಿನ ಜಾವ 3.30 ರ ಸುಮಾರಿಗೆ ಕುಡಿದ ಮತ್ತಿನಲ್ಲಿ ಅವರು ಆಯತಪ್ಪಿ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದರು.
ತಕ್ಷಣವೇ ಅಪಾರ್ಟ್ಮೆಂಟಿನ ಭದ್ರತಾ ಸಿಬ್ಬಂದಿ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ರಾಧಿಕಾ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಅಷ್ಟರಲ್ಲೇ ಅಸುನೀಗಿದ್ದರು. ಘಟನೆಗೆ ಸಂಬಂಧಿಸಿದಂತೆ ಅವರ ಸಹೋದ್ಯೋಗಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬಾಲ್ಕನಿಯಲ್ಲಿ ನಿಂತಿದ್ದ ರಾಧಿಕಾ ಆಯತಪ್ಪಿ ಬಿದ್ದಿದ್ದಾರೆ ಎಂದು ಆಕೆಯ ಸಹೋದ್ಯೋಗಿ ಹೇಳಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.











Click it and Unblock the Notifications