• search
 • Live TV
ನೋಯ್ಡಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಶಂಕುಸ್ಥಾಪನೆ

|
Google Oneindia Kannada News

ನೋಯ್ಡಾ, ನವೆಂಬರ್ 25: ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಜೆವಾರ್‌ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಧ್ಯಾಹ್ನ 1 ಗಂಟೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೊದಲ ಹಂತದಲ್ಲಿ 10,050 ಕೋಟಿಗೂ ಅಧಿಕ ವೆಚ್ಚದಲ್ಲಿ ವಿಮಾನ ನಿಲ್ದಾಣದವನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ವಿಮಾನ ನಿಲ್ದಾಣವು 1300 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದ ಪೂರ್ಣಗೊಂಡ ನಂತರದಲ್ಲಿ ವಿಮಾನ ನಿಲ್ದಾಣವು ವರ್ಷಕ್ಕೆ ಸುಮಾರು 1.2 ಕೋಟಿ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುವ ಸಾಮರ್ಥ್ಯ ಹೊಂದಿರುತ್ತದೆ. ವಿಮಾನ ನಿಲ್ದಾಣ ನಿರ್ಮಾಣ ಕಾರ್ಯವನ್ನು 2024ರ ಹೊತ್ತಿಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.

ಮಾತು ಕೊಟ್ಟ ಸರ್ಕಾರ ಮಂಗಮಾಯ: ಜೇವರ್ ಏರ್‌ಪೋರ್ಟ್‌ಗೆ ಭೂಮಿ ಕೊಟ್ಟವರಿಗೆ ನೆಲೆಯಿಲ್ಲ! ಮಾತು ಕೊಟ್ಟ ಸರ್ಕಾರ ಮಂಗಮಾಯ: ಜೇವರ್ ಏರ್‌ಪೋರ್ಟ್‌ಗೆ ಭೂಮಿ ಕೊಟ್ಟವರಿಗೆ ನೆಲೆಯಿಲ್ಲ!

ಪ್ರಧಾನ ಮಂತ್ರಿ ಕಚೇರಿ (PMO) ಪ್ರಕಾರ, ಉತ್ತರ ಪ್ರದೇಶವು ಐದು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಭಾರತದ ಏಕೈಕ ರಾಜ್ಯವಾಗಲಿದೆ. ವಿಮಾನ ನಿಲ್ದಾಣದ ಅಭಿವೃದ್ಧಿಯು ಭವಿಷ್ಯದಲ್ಲಿ ವಾಯು ಸಾರಿಗೆ ಕ್ಷೇತ್ರದ ಅಭಿವೃದ್ಧಿ ಮತ್ತು ಸಂಪರ್ಕ ವ್ಯವಸ್ಥೆಯನ್ನು ವೃದ್ಧಿಸುವ ಪ್ರಧಾನಮಂತ್ರಿ ದೃಷ್ಟಿಗೆ ಅನುಗುಣವಾಗಿದೆ ಎಂದು ತಿಳಿಸಿದೆ.

ಉತ್ತರ ಪ್ರದೇಶದ ಮೇಲೆ ವಿಶೇಷ ಗಮನ:

ಇತ್ತೀಚೆಗೆ ಉದ್ಘಾಟನೆಗೊಂಡ ಕುಶಿನಗರ ವಿಮಾನ ನಿಲ್ದಾಣ ಮತ್ತು ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಅನೇಕ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಾಕ್ಷಿಯಾಗಿರುವ ಉತ್ತರ ಪ್ರದೇಶದ ಮೇಲೆ ಪ್ರಧಾನಿ ಅವರ ದೂರದೃಷ್ಟಿಯ ವಿಚಾರದಲ್ಲಿ ವಿಶೇಷ ಗಮನ ಹರಿಸಲಾಗಿದೆ. ಈ ವಿಮಾನ ನಿಲ್ದಾಣವು ದೆಹಲಿ ಎನ್‌ಸಿಆರ್‌ನಲ್ಲಿ ಬರುವ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ.

ಇದರಿಂದ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಐಜಿಐ) ದಟ್ಟಣೆಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಈ ವಿಮಾನ ನಿಲ್ದಾಣದ ಜಾಗವು ವ್ಯೂಹಾತ್ಮಕವಾಗಿ ರಚಿಸಲಾಗಿದ್ದು, ದೆಹಲಿ, ನೋಯ್ಡಾ, ಗಾಜಿಯಾಬಾದ್, ಅಲಿಗಢ, ಆಗ್ರಾ, ಫರಿದಾಬಾದ್ ನಗರಗಳು ಮತ್ತು ನೆರೆಯ ಪ್ರದೇಶಗಳ ಜನರಿಗೆ ಸೇವೆ ಒದಗಿಸಲಿದೆ.

ದೆಹಲಿ-ನೋಯ್ಡಾ ನಡುವೆ 21 ನಿಮಿಷದ ಪ್ರಯಾಣ:

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಬಹುಮಾದರಿ ಸಾರಿಗೆ ಕೇಂದ್ರವನ್ನು ಹೊಂದಿರಲಿದೆ. ಮೆಟ್ರೋ ಮತ್ತು ಹೈಸ್ಪೀಡ್ ರೈಲು ನಿಲ್ದಾಣಗಳು, ಟ್ಯಾಕ್ಸಿ, ಬಸ್ ಸೇವೆಗಳು ಮತ್ತು ಖಾಸಗಿ ಪಾರ್ಕಿಂಗ್ ವ್ಯವಸ್ಥೆಯನ್ನು ಒಳಗೊಂಡಿರುವ ಭೂಸಾರಿಗೆ ಕೇಂದ್ರವನ್ನು ಇಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ರಸ್ತೆ, ರೈಲು ಮತ್ತು ಮೆಟ್ರೋದೊಂದಿಗೆ ವಿಮಾನ ನಿಲ್ದಾಣವು ತಡೆರಹಿತ ಸಂಪರ್ಕದಲ್ಲಿ ಸಕ್ರಿಯವಾಗಿರುತ್ತದೆ.

ನೋಯ್ಡಾ ಮತ್ತು ದೆಹಲಿಯಿಂದ ವಿಮಾನ ನಿಲ್ದಾಣಕ್ಕೆ ತಡೆರಹಿತ ಮೆಟ್ರೋ ಸೇವೆಯ ಮೂಲಕ ಸಂಪರ್ಕ ಕಲ್ಪಿಸಲಾಗುವುದು. ಹತ್ತಿರದ ಎಲ್ಲಾ ಪ್ರಮುಖ ರಸ್ತೆಗಳು ಮತ್ತು ಹೆದ್ದಾರಿಗಳಾದ ʻಯಮುನಾ ಎಕ್ಸ್‌ಪ್ರೆಸ್‌ವೇʼ, ʻವೆಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇʼ, ʻಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇʼ, ʻದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇʼ ಮತ್ತು ಇತರ ಪ್ರಮುಖ ಹೆದ್ದಾರಿಗಳನ್ನು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸಲಾಗುವುದು. ವಿಮಾನ ನಿಲ್ದಾಣವನ್ನು ಉದ್ದೇಶಿತ ದೆಹಲಿ-ವಾರಾಣಸಿ ಹೈಸ್ಪೀಡ್ ರೈಲು ಸೇವೆಯೊಂದಿಗೆ ಸಂಪರ್ಕಿಸಲಾಗುವುದು. ಇದರಿಂದ ದೆಹಲಿ ಮತ್ತು ನೋಯ್ಡಾ ವಿಮಾನ ನಿಲ್ದಾಣದ ನಡುವೆ ಕೇವಲ 21 ನಿಮಿಷಗಳಲ್ಲಿ ಪ್ರಯಾಣ ಮಾಡುವುದಕ್ಕೆ ಸಾಧ್ಯವಾಗುತ್ತದೆ.

2024ರ ವೇಳೆಗೆ ನಿರ್ಮಾಣ ಕಾರ್ಯ ಪೂರ್ಣ:

ನೋಯ್ಡಾ ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿಗೆ 10,050 ಕೋಟಿ ರೂಪಾಯಿಗಳಿಗಿಂತಲೂ ಅಧಿಕ ಮೊತ್ತವನ್ನು ಖರ್ಚು ಮಾಡಲಾಗುತ್ತಿದೆ. ಇದರ ಪೂರ್ಣ ಕಾಮಗಾರಿಯನ್ನು 2024ರ ವೇಳೆಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. 1300 ಹೆಕ್ಟೇರ್‌ಗೂ ಅಧಿಕ ಭೂಮಿಯಲ್ಲಿ ವಿಸ್ತರಿಸಿರುವ ಈ ವಿಮಾನ ನಿಲ್ದಾಣದ ಮೊದಲ ಹಂತದ ಪೂರ್ಣಗೊಂಡ ನಂತರ ವರ್ಷಕ್ಕೆ ಸುಮಾರು 1.2 ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ಹೊಂದಿರಲಿದೆ. ಈ ಯೋಜನೆಯನ್ನು ಅಂತರರಾಷ್ಟ್ರೀಯ ಬಿಡ್ಡರ್ ʻಜ್ಯೂರಿಚ್ ಏರ್‌ಪೋರ್ಟ್‌ ಇಂಟರ್‌ನ್ಯಾಷನಲ್‌ ಎಜಿʼ ರಿಯಾಯಿತಿದಾರ ಸಂಸ್ಥೆಯಾಗಿ ಕಾರ್ಯಗತಗೊಳಿಸಲಿದೆ. ಭೂ ಸ್ವಾಧೀನ ಮತ್ತು ಬಾಧಿತ ಕುಟುಂಬಗಳ ಪುನರ್ವಸತಿಗೆ ಸಂಬಂಧಿಸಿದ ಮೊದಲ ಹಂತದ ಕೆಲಸ ಪೂರ್ಣಗೊಂಡಿದೆ.

   Shreyas Iyer ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ವಿಶೇಷ ಕ್ಷಣಗಳು | Oneindia Kannada
   English summary
   PM Narendra Modi To Lay Foundation Stone Of Noida International Airport on Thursday. Know More.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X