• search
  • Live TV
ನೋಯ್ಡಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಶಿ ತರೂರ್, ಆರು ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ

|
Google Oneindia Kannada News

ನೋಯ್ಡಾ, ಜನವರಿ 29: ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಆರು ಮಂದಿ ಪತ್ರಕರ್ತರ ವಿರುದ್ಧ ಉತ್ತರ ಪ್ರದೇಶದ ನೋಯ್ಡಾ ಪೊಲೀಸರು ದೇಶದ್ರೋಹದ ಪ್ರಕರಣ ಹಾಗೂ ಇತರೆ ಪ್ರಕರಣಗಳನ್ನು ದಾಖಲಿಸಿದ್ದಾರೆ.

ರೈತರ ಟ್ರ್ಯಾಕ್ಟರ್ ಮೆರವಣಿಗೆ ಸಂದರ್ಭದಲ್ಲಿ ಹಿಂಸಾಚಾರ ನಡೆಯಲು ಈ ವ್ಯಕ್ತಿಗಳ ಡಿಜಿಟಲ್ ಪ್ರಸಾರಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್‌ಗಳೇ ಕಾರಣ ಎಂದು ನೋಯ್ಡಾದ ನಿವಾಸಿಯೊಬ್ಬರು ಸೆಕ್ಷನ್ 20 ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಅದರ ಆಧಾರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇಂಡಿಯಾ ಟುಡೇಯಲ್ಲಿ ಸದ್ಯಕ್ಕೆ ರಾಜ್ ದೀಪ್ ಸರ್ದೇಸಾಯಿ ಕಾಣಿಸಲ್ಲವೇಕೆ?ಇಂಡಿಯಾ ಟುಡೇಯಲ್ಲಿ ಸದ್ಯಕ್ಕೆ ರಾಜ್ ದೀಪ್ ಸರ್ದೇಸಾಯಿ ಕಾಣಿಸಲ್ಲವೇಕೆ?

ಪತ್ರಕರ್ತರಾದ ಮೃಣಾಲ್ ಪಾಂಡೆ, ರಾಜದೀಪ್ ಸರ್ದೇಸಾಯಿ, ವಿನೋದ್ ಜೋಸ್, ಜಾಫರ್ ಅಘಾ, ಪರೇಶ್ ನಾಥ್ ಮತ್ತು ಅನಂತ್ ನಾಥ್ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಜತೆಗೆ ಅನಾಮಧೇಯ ವ್ಯಕ್ತಿಯೊಬ್ಬರನ್ನು ಕೂಡ ಹೆಸರಿಸಲಾಗಿದೆ. ಮುಂದೆ ಓದಿ.

ದಾಖಲಾದ ಪ್ರಕರಣಗಳು ಯಾವುವು?

ದಾಖಲಾದ ಪ್ರಕರಣಗಳು ಯಾವುವು?

ಎಫ್‌ಐಆರ್ ದಾಖಲಿಸಿರುವುದನ್ನು ನೋಯ್ಡಾ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಐಪಿಸಿ ಸೆಕ್ಷನ್ 124 ಎ (ದೇಶದ್ರೋಹ), 295 ಎ (ಧರ್ಮ ಅಥವಾ ಧಾರ್ಮಿಕ ನಂಬಿಕೆಯನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಉದ್ದೇಶಪೂರ್ವಕ ಮತ್ತು ದ್ವೇಷಪೂರಿತ ಕೃತ್ಯ), 504 (ಶಾಂತಿ ಉಲ್ಲಂಘನೆಯ ಉದ್ದೇಶದೊಂದಿಗೆ ಕೆರಳಿಸುವ ಸಲುವಾಗಿ ಉದ್ದೇಶಪೂರ್ವಕ ಅವಮಾನಿಸುವಿಕೆ), 506 (ಅಪರಾಧ ಬೆದರಿಕೆ) 34 (ಸಾಮಾನ್ಯ ಉದ್ದೇಶದೊಂದಿಗೆ ಹಲವು ವ್ಯಕ್ತಿಗಳು ನಡೆಸಿದ ಕೃತ್ಯ), 120 ಬಿ (ಅಪರಾಧ ಸಂಚು) ಹಾಗೂ ಇತರೆ ಪ್ರಕರಣಗಳನ್ನು ದಾಖಲಿಸಲಾಗಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ

ಮಾಹಿತಿ ತಂತ್ರಜ್ಞಾನ ಕಾಯ್ದೆ

ಇದರ ಜತೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿ ಕೂಡ ಪ್ರಕರಣ ದಾಖಲು ಮಾಡಲಾಗಿದೆ. ಈ ಪ್ರಕರಣದ ಬಗ್ಗೆ ನೋಯ್ಡಾ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ-ಯುಪಿ ಗಡಿಯಿಂದ ರೈತರನ್ನು ಓಡಿಸುವ ಯತ್ನದಲ್ಲಿ ಪೊಲೀಸರು!ದೆಹಲಿ-ಯುಪಿ ಗಡಿಯಿಂದ ರೈತರನ್ನು ಓಡಿಸುವ ಯತ್ನದಲ್ಲಿ ಪೊಲೀಸರು!

ಯುವಕನ ಸಾವಿನ ಬಗ್ಗೆ ಗೊಂದಲ

ಯುವಕನ ಸಾವಿನ ಬಗ್ಗೆ ಗೊಂದಲ

ಮೆರವಣಿಗೆ ಸಂದರ್ಭದಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದ. ಆದರೆ ಆತ ಪೊಲೀಸರ ಗುಂಡೇಟಿನಿಂದ ಮೃತಪಟ್ಟಿದ್ದಾನೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಇದನ್ನು ಶಶಿ ತರೂರ್ ಹಾಗೂ ಕೆಲವು ಪತ್ರಕರ್ತರು ಕೂಡ ಟ್ವೀಟ್ ಮಾಡಿದ್ದರು. ರಾಜ್‌ದೀಪ್ ಸರ್ದೇಸಾಯಿ ಸಹ ಗುಂಡೇಟಿನಿಂದ ಆತ ಸತ್ತಿದ್ದಾನೆ ಎಂದು ಟ್ವೀಟ್ ಮಾಡಿ, ಬಳಿಕ ಅದನ್ನು ಅಳಿಸಿಹಾಕಿದ್ದರು. ಆದರೆ ಯುವಕನಿಗೆ ಗುಂಡೇಟು ಬಿದ್ದಿಲ್ಲ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ.

ರಾಜ್‌ದೀಪ್ ಸರ್ದೇಸಾಯಿ

ರಾಜ್‌ದೀಪ್ ಸರ್ದೇಸಾಯಿ

ತಪ್ಪು ಟ್ವೀಟ್ ಮಾಡುವ ಮೂಲಕ ಜನರನ್ನು ಕೆರಳಿಸುವ ಪ್ರಯತ್ನ ಮಾಡಿರುವ ಇಂಡಿಯಾ ಟುಡೆ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರನ್ನು ಬಂಧಿಸಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹ ವ್ಯಕ್ತವಾಗಿತ್ತು. ಇಂಡಿಯಾ ಟುಡೆ ಸಂಸ್ಥೆಯು ರಾಜ್‌ದೀಪ್ ಅವರು ತೆರೆಯ ಮೇಲೆ ಕಾಣಿಸಿಕೊಳ್ಳದಂತೆ ತಾತ್ಕಾಲಿಕ ನಿರ್ಬಂಧ ಹೇರಿದ್ದು, ಒಂದು ತಿಂಗಳ ವೇತನ ಕಡಿತ ಸಹ ವಿಧಿಸಿದೆ ಎಂದು ಹೇಳಲಾಗಿದೆ.

ದೆಹಲಿ ಹಿಂಸಾಚಾರ ಪರಿಣಾಮ: ಬಜೆಟ್ ದಿನದ ಸಂಸತ್ ಕಡೆಗೆ ರೈತರ ಮೆರವಣಿಗೆ ರದ್ದುದೆಹಲಿ ಹಿಂಸಾಚಾರ ಪರಿಣಾಮ: ಬಜೆಟ್ ದಿನದ ಸಂಸತ್ ಕಡೆಗೆ ರೈತರ ಮೆರವಣಿಗೆ ರದ್ದು

English summary
Noida police have booked Sedition case against Shashi tharoor and six journalists over the violence during farmers tractor rally at Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X