ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತ್ಯೇಕ ಪ್ರಕರಣಗಳಲ್ಲಿ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

|
Google Oneindia Kannada News

ನೋಯ್ಡಾ(ಉತ್ತರ ಪ್ರದೇಶ), ಸೆಪ್ಟೆಂಬರ್ 23: ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆಯೊಬ್ಬರ ಮೇಲೆ ಕೆಲ ಪುರುಷರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

ವಿಶಿಷ್ಠ ಚೇತನ ಯುವತಿ ಮೇಲೆ ಸ್ವಯಂಘೋಷಿತ 'ಬಾಬಾ'ವಿಶಿಷ್ಠ ಚೇತನ ಯುವತಿ ಮೇಲೆ ಸ್ವಯಂಘೋಷಿತ 'ಬಾಬಾ'

ಇಂದು ಒಂದೇ ದಿನ ಉತ್ತರ ಪ್ರದೇಶದ ವಿವಿಧ ಕಡೆಗಳಲ್ಲಿ ಮೂರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

Woman gangraped in a moving car in Noida, UP

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಸ್ಕಾರ್ಪಿಯೋ ಗಾಡಿಯಲ್ಲಿ ಬರುತ್ತಿದ್ದ ಕೆಲ ದುಷ್ಕರ್ಮಿಗಳು ಅಪಹರಿಸಿ, ಚಲಿಸುತ್ತಿದ್ದ ಕಾರಿನಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಸದ್ಯಕ್ಕೆ ಯುವತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

ಬೆಳಗಾವಿ: 3ರ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿ ಬಂಧನಬೆಳಗಾವಿ: 3ರ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿ ಬಂಧನ

ಮೋರಾದಾಬಾದ್: ಮಹಿಳೆಯೊಬ್ಬರಿಗೆ ಮದ್ಯಪಾನ ಮಾಡಿಸಿ, ನಶೆಯಲ್ಲಿದ್ದ ಅವರ ಮೇಲೆ ನಾಲ್ವರು ಪುರುಷರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಮೋರಾದಾಬಾದ್ ನಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಗಾಜಿಯಾಬಾದ್: ನರ್ಸ್ ಒಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅವರ ಬಳಿ ಇದ್ದ ಒಡವೆ, ಹಣಗಳನ್ನು ದೋಚಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ.

English summary
A woman was allegedly gang-raped in a moving vehicle in Noida on Sep 23. The incident took place at Noida Sector 39. The woman was pulled into a Scorpio car by men at Golf course metro station and then was allegedly gangraped in a moving car.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X