ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪತಿಯ ಚಿಕಿತ್ಸೆಗೆಂದು ಹೋಗಿದ್ದ ಮಹಿಳೆ ಮೇಲೆ ವೈದ್ಯರಿಂದ ಅತ್ಯಾಚಾರ

|
Google Oneindia Kannada News

ನೊಯ್ಡಾ, ಅಕ್ಟೋಬರ್ 8: ಪತಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಗಂಭೀರ ಆರೋಪ ಕೇಳಿಬಂದಿದೆ.

ಪತಿಗೆ ಅನಾರೋಗ್ಯವೆಂದು ಆಸ್ಪತ್ರೆಗೆ ಕರೆತಂದ ಮಹಿಳೆಯ ಮೇಲೆ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಸೇರಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಮಹಿಳೆ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದು,ದೂರು ನೀಡಲು ಹೋದ ಮಹಿಳೆಗೆ ಪೊಲೀಸರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದ್ದಾರೆ.

ಉ.ಪ್ರ. ಬಿಜೆಪಿ ಮುಖಂಡನ ವಿರುದ್ಧ ದೂರು ನೀಡಿದ್ದ ಮಹಿಳೆಯ ಬಂಧನಉ.ಪ್ರ. ಬಿಜೆಪಿ ಮುಖಂಡನ ವಿರುದ್ಧ ದೂರು ನೀಡಿದ್ದ ಮಹಿಳೆಯ ಬಂಧನ

ಸೆಕ್ಟರ್-31ರ ನಿಠಾರಿ ಗ್ರಾಮದ ನಿವಾಸಿಯಾಗಿರುವ ಮಹಿಳೆ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಾರೆ. ಜುಲೈನಲ್ಲಿ ದಿಢೀರ್ ಅಂತಾ ಪತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂತು. ಚಿಕಿತ್ಸೆಗಾಗಿ ಪತಿಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯ ಸ್ಟಾಫ್ ನರ್ಸ್ ಪರಿಚಯವಾದನು. ಹೀಗೆ ನಮ್ಮಿಬ್ಬರ ಮಧ್ಯೆ ಸ್ನೇಹ ಹುಟ್ಟಿಕೊಂಡಿತ್ತು.

Woman Raped By Doctor Over Husbands Treatment

ನನ್ನ ಸ್ನೇಹವನ್ನು ದುರುಪಯೋಗಪಡಿಸಿಕೊಂಡ ನರ್ಸ್ ಯುವಕ, ಓರ್ವ ವೈದ್ಯ ಹಾಗೂ ಕೆಲವು ಸಿಬ್ಬಂದಿ ಜೊತೆ ಸೇರಿಕೊಂಡು ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

English summary
A woman who went to the hospital for treatment of her husband has been accused of rape.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X