ಮಹಿಳೆ ಅತ್ಯಾಚಾರ ನಡೆಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಯೂಟ್ಯೂಬರ್ ಬಂಧನ
ನೋಯ್ಡಾ, ಡಿಸೆಂಬರ್ 11: ಮಹಿಳೆಯೊಬ್ಬರಿಗೆ ಪ್ರಜ್ಞೆ ತಪ್ಪಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ನೋಯ್ಡಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತನನ್ನು ರಾಜೀವ್ ಕುಮಾರ್ ಎಂದು ಗುರುತಿಸಲಾಗಿದೆ.
ಯೂಟ್ಯೂಬ್ ನಲ್ಲಿ ಫಿಟ್ ನೆಸ್ ಕಲಿಸುತ್ತಿದ್ದ ರಾಜೀವ್, ಆ ಮೂಲಕವೇ ಮಹಿಳೆಗೆ ಪರಿಚಿತನಾಗಿದ್ದ. ಪರಿಚಿತನಾದ ನಂತರ ಆಕೆಯನ್ನು ಭೇಟಿಯಾಗಬೇಕೆಂದು ತಿಳಿಸಿ ಕರೆಸಿಕೊಂಡಿದ್ದ. ಈ ಸಮಯದಲ್ಲಿ ಆಕೆಗೆ ಪಾನೀಯದಲ್ಲಿ ಮತ್ತು ಬರಿಸುವ ಔಷಧ ನೀಡಿ ಪ್ರಜ್ಞೆ ತಪ್ಪುವಂತೆ ಮಾಡಿ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆಯನ್ನೂ ಹಾಕುತ್ತಿದ್ದ ಎಂದು ಮಹಿಳೆ ದೂರಿದ್ದಾರೆ.
ಬ್ಲಾಕ್ ಮೇಲ್ ಮಾಡಿ ಮಹಿಳೆಯ ಬಳಿ 13 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದು, ಸ್ವಲ್ಪ ಹಣ ಕೊಟ್ಟ ಮೇಲೂ ಆಕೆಯ ವಿಡಿಯೋವನ್ನು ಪೋಸ್ಟ್ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಮಹಿಳೆ ನೋಯ್ಡಾ ಪೊಲೀಸ್ ಠಾಣೆಯಲ್ಲಿ ರಾಜೀವ್ ವಿರುದ್ಧ ದೂರು ದಾಖಲಿಸಿದ್ದರು.'

ಶುಕ್ರವಾರ ಡಿಸಿಪಿ ವೃಂದಾ ಶುಕ್ಲಾ ರಾಜೀವ್ ನನ್ನು ಬಂಧಿಸಿದ್ದಾರೆ. ಈತನನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications