ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ; ಪ್ರಯಾಣಿಕರಿಗೆ ಕ್ವಾರಂಟೈನ್ ಕುರಿತ ಮಾಹಿತಿ

|
Google Oneindia Kannada News

ಪಣಜಿ, ಆಗಸ್ಟ್ 05: ಗೋವಾ ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಘೋಷಣೆ ಮಾಡಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7075 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 1901.

Recommended Video

BS Yediyurappa , Manipal ಆಸ್ಪತ್ರೆಯಿಂದಲೇ ನಿರಂತರ ಕೆಲಸ | Oneindia Kannada

ಬುಧವಾರ ಸರ್ಕಾರ ಕ್ವಾರಂಟೈನ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಎಲ್ಲಾ ಪ್ರಯಾಣಿಕರು 14 ದಿನದ ಹೋಂ ಕ್ವಾರಟೈನ್‌ಗೆ ಒಳಗಾಗಬೇಕು. ಇಲ್ಲವಾದದಲ್ಲಿ ತಾವೇ ಖರ್ಚು ಭರಿಸಿ 14 ದಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರಬೇಕು.

ಗೋವಾ ಪ್ರವಾಸಿಗರಿಗೆ ಸಿಹಿಸುದ್ದಿ ನೀಡಿದ ಸರ್ಕಾರ! ಗೋವಾ ಪ್ರವಾಸಿಗರಿಗೆ ಸಿಹಿಸುದ್ದಿ ನೀಡಿದ ಸರ್ಕಾರ!

ರಾಜ್ಯಕ್ಕೆ ಬರುವ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತದೆ. ರೋಗ ಲಕ್ಷಣಗಳು ಕಂಡು ಬಂದರೆ ಎಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ ಎಂದು ಗೋವಾ ಸರ್ಕಾರ ಹೇಳಿದೆ.

ಕೊರೊನಾ ಭೀತಿಯಲ್ಲೂ ಪ್ರವಾಸೋದ್ಯಮ ಪುನರಾರಂಭಿಸಿದ ಗೋವಾಕೊರೊನಾ ಭೀತಿಯಲ್ಲೂ ಪ್ರವಾಸೋದ್ಯಮ ಪುನರಾರಂಭಿಸಿದ ಗೋವಾ

14 Days Of Home Quarantine For Passengers In Goa

ಗೋವಾಕ್ಕೆ ಬರುವ ಪ್ರಯಾಣಿಕರು ಐಸಿಎಂಆರ್ ಮಾನ್ಯತೆ ಪಡೆದ ಲ್ಯಾಬ್‌ನಿಂದ ಕೋವಿಡ್ ಪರೀಕ್ಷೆ ನೆಗೆಟಿವ್ ವರದಿ ಪಡೆದಿದ್ದರೆ ಹೋಂ ಕ್ವಾರಂಟೈನ್‌ನಿಂದ ವಿನಾಯಿತಿ ಇದೆ. ಈ ವರದಿ 48 ಗಂಟೆಗಳ ಹಿಂದಿನದ್ದು ಆಗಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.

 ಗೋ ಗೋ ಗೋವಾ..ಕೊಂಕಣ್ ರೈಲ್ವೆ, ವಿಮಾನ ಸಂಚಾರ ಶುರು ಗೋ ಗೋ ಗೋವಾ..ಕೊಂಕಣ್ ರೈಲ್ವೆ, ವಿಮಾನ ಸಂಚಾರ ಶುರು

ರಾಜ್ಯಕ್ಕೆ ಆಗಮಿಸಿದವರು ಕೋವಿಡ್ ಪರೀಕ್ಷೆಗೆ ಒಪ್ಪಿದರೆ 2 ಸಾವಿರ ರೂ. ನೀಡಿ ಪರೀಕ್ಷೆಗೆ ಒಳಪಡಬಹುದು. ವರದಿ ಬರುವ ತನಕ ಹೋಂ/ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರಬೇಕು.

ಪ್ರವಾಸಿಗರು ಮುಂಗಡವಾಗಿ ಹೋಟೆಲ್ ಬುಕ್ಕಿಂಗ್ ಮಾಡಿಕೊಂಡು ಬರಬೇಕು. ರಾಜ್ಯದ ಗಡಿಯಲ್ಲಿ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಳ್ಳಬೇಕು. ಸೋಂಕಿನ ಲಕ್ಷಣ ಕಂಡುಬಂದರೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಅವರ ಖರ್ಚಿನಲ್ಲಿಯೇ ಚಿಕಿತ್ಸೆ ಪಡೆಯಬೇಕು.

ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರು ಕೋವಿಡ್ ನೆಗಟಿವ್ ವರದಿಯ ಪ್ರಮಾಣ ಪತ್ರ ತರಬೇಕು. ಒಂದು ವೇಳೆ ಪ್ರಮಾಣ ಪತ್ರ ಇಲ್ಲವಾದಲ್ಲಿ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಬೇಕಾಗುತ್ತದೆ.

English summary
Goa government said that all passengers arriving to state required to go for 14 days of home quarantine or they can choose 14 days of paid institutional quarantine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X