ಒಂದೇ ಕುಟುಂಬದ 6 ಮಂದಿಗೆ ಕೊರೊನಾ, ಹಲವರಿಗೆ ರೋಗಲಕ್ಷಣ ಇಲ್ಲ

ಪಣಜಿ, ಜೂನ್ 3: ಗೋವಾದ ಮಾಂಗೋರ್ ಹಿಲ್ ಪ್ರದೇಶದಲ್ಲಿ ಒಂದೇ ಕುಟುಂಬದ ಆರು ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಫಲಿತಾಂಶ ಬಂದಿದೆ ಎಂದು ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

ಒಂದೇ ಕುಟುಂಬದ 6 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ, ಆ ಪ್ರದೇಶವನ್ನು ಕಂಟೈನ್‌ಮೆಂಟ್ ಜೋನ್ ಎಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.

ಇಲ್ಲಿಯವರೆಗೂ ಮಂಗೋರ್ ಹಿಲ್ ಪ್ರದೇಶದಲ್ಲಿ ಒಟ್ಟು 40 ಮಂದಿಗೆ ಕೊವಿಡ್ ಸೋಂಕು ಕಾಣಿಸಿಕೊಂಡಿದೆ. ಅಚ್ಚರಿ ಅಂದ್ರೆ ಅದರಲ್ಲಿ ಯಾರಿಗೂ ಯಾವುದೇ ರೋಗ ಲಕ್ಷಣಗಳಿಲ್ಲ. ಇದು ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ.

ಒಂದೇ ಪ್ರದೇಶದಲ್ಲಿ ನಾಲವತ್ತು ಜನರಿಗೆ ಸೋಂಕು ಕಾಣಿಸಿಕೊಂಡಿರುವ ಕಾರಣ, ಗೋವಾದಲ್ಲಿ ಸಮುದಾಯ ಹಂತಕ್ಕೆ ತಲುಪಿದ್ಯಾ ಎಂಬ ಆತಂಕ ಕಾಡಿದೆ. ಆದರೆ, ಈ ಬಗ್ಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಮಾತನಾಡಿದ್ದು, ''ಇದು ಸಮುದಾಯ ಹಂತವಲ್ಲ'' ಎಂದಿದ್ದಾರೆ.

6 persons of a family in Goa have tested positive for COVID19

ಇದುವರೆಗೂ ಗೋವಾದಲ್ಲಿ 79 ಜನರಿಗೆ ಕೊವಿಡ್ ಸೋಂಕು ತಗುಲಿದೆ. 57 ಜನರು ಸೋಂಕಿನಿಂದ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ. 22 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+