ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: ಓರ್ವ ಕಾರ್ಮಿಕ ಸಾವು

|
Google Oneindia Kannada News

ಪಣಜಿ, ಅಕ್ಟೋಬರ್ 10: ಗೋವಾದ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ.

ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿರುವ ಸಮುದ್ರ ಆಹಾರ ಸಂಸ್ಕರಣಾ ಘಟಕದಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕುಮಟಾದಲ್ಲಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ಅನಿಲ ಸೋರಿಕೆಕುಮಟಾದಲ್ಲಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ಅನಿಲ ಸೋರಿಕೆ

ಅಮೋನಿಯಂ ಅನಿಲ ಸೋರಿಕೆಯಾದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣ ಗೋವಾದ ಕುಂಕೋಲಿಮ್ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ನಡೆದಿದೆ.

Ammonia Gas Leak In Goa Factory One Worker Dies, Four Injured Due

ಜಿಐಡಿಸಿ ಅಧ್ಯಕ್ಷ ಗ್ಲೆನ್ ಟಿಕ್ಲೊ ಅವರು ಈ ಹಿಂದೆ ಕಾರ್ಖಾನೆಯ ನಿರ್ವಹಣೆ, ಸ್ಥಾವರ ಸ್ಥಿತಿಯ ಬಗ್ಗೆ ನೋಟಿಸ್ ನೀಡಿದ್ದರು, ಆದರೆ ಈ ಬಗ್ಗೆ ನಿರ್ಲಕ್ಷ ತಾಳಲಾಗಿತ್ತು, ಆದರೆ ಈ ಘಟನೆಯ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.

ಆವರಣದಲ್ಲಿ ಸೋರಿಕೆಯಾದ ಅಮೋನಿಯಂ ಅನಿಲವನ್ನು ಉಸಿರಾಡಿದ ನಂತರ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇತರ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿ ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರ್ಮಿಕರು ನಿದ್ದೆ ಮಾಡುವಾಗ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದರು. ಏತನ್ಮಧ್ಯೆ ಇಂಡಸ್ಟ್ರಿಯಲ್ ಎಸ್ಟೇಟ್ ಅನ್ನು ನಿರ್ವಹಿಸುವ ಗೋವಾ ಕೈಗಾರಿಕಾ ಅಭಿವೃದ್ಧಿ ನಿಗಮ ಈ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದೆ.

English summary
One worker died and four others were critically injured after ammonia gas leaked in a seafood processing unit at Cuncolim industrial estate in South Goa, police said on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X