ಗೋವಾದಲ್ಲಿ ಸರಳ ಬಹುಮತದಿಂದ ಬಿಜೆಪಿ ಸರ್ಕಾರ; ಪ್ರಮೋದ್ ಸಾವಂತ್

ಪಣಜಿ, ಜನವರಿ 19; "22ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಗೋವಾದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಸರ್ಕಾರ ರಚನೆ ಮಾಡಲಿದೆ" ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು.

ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ. ಜನವರಿ 21ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಎಎನ್‌ಐ ಜೊತೆ ಚುನಾವಣೆ ಕುರಿತು ಪ್ರಮೋದ್ ಸಾವಂತ್ ಮಾತನಾಡಿದರು.

"ಇದೇ ಮೊದಲ ಬಾರಿಗೆ ರಾಜ್ಯದ 40 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡುತ್ತಿದೆ. ನನಗೆ ವಿಶ್ವಾಸವಿದೆ, ಬಿಜೆಪಿ ಬುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ. 22 + ಸ್ಥಾನಗಳಲ್ಲಿ ಜಯಗಳಿಸುವುದು ನಮ್ಮ ಗುರಿ" ಎಂದರು.

"ರಾಜ್ಯದಲ್ಲಿ 10 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ. ನಾನು ಕಳೆದ ಮೂರು ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದೇನೆ. ಗೋವಾದ ಜನರಿಗಾಗಿ ಬಿಜೆಪಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ" ಎಂದು ಪ್ರಮೋದ್ ಸಾವಂತ್ ಹೇಳಿದರು.

2017ರ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಿರಲಿಲ್ಲ. ಆದರೆ 13 ಸ್ಥಾನಗಳಲ್ಲಿ ಗೆದ್ದ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. 17 ಸ್ಥಾನ ಗೆದ್ದು ದೊಡ್ಡ ಪಕ್ಷವಾದರೂ ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ವಿಫಲವಾಗಿ ಪ್ರತಿಪಕ್ಷ ಸ್ಥಾನದಲ್ಲಿ ಕೂತಿತ್ತು.

ಜನರು ಬಿಜೆಪಿಗೆ ಮತ ಹಾಕಲಿದ್ದಾರೆ

ಜನರು ಬಿಜೆಪಿಗೆ ಮತ ಹಾಕಲಿದ್ದಾರೆ

"10 ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ರಾಜ್ಯದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ನಾವು ಜಾರಿಗೊಳಿಸಿದ್ದೇವೆ. ಗೋವಾದ ಜನರು ಸಂತಸದಿಂದ ಇದ್ದು, ಬಿಜೆಪಿಗೆ ಮತದಾನ ಮಾಡಲಿದ್ದಾರೆ" ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು.

2017ರ ಚುನಾವಣೆಯಲ್ಲಿ ಗೋವಾದಲ್ಲಿ ಬಿಜೆಪಿ ಕೇವಲ 13 ಸ್ಥಾನಗಳಲ್ಲಿ ಜಯಗಳಿಸಿತ್ತು. ಆದರೆ 17 ಸ್ಥಾನ ಗೆದ್ದ ಕಾಂಗ್ರೆಸ್‌ಗೆ ಶಾಕ್ ಕೊಟ್ಟು ಸರ್ಕಾರ ರಚನೆ ಮಾಡಿತ್ತು.

ಹೈಕಮಾಂಡ್ ನಾಯಕರು ಸಂಪರ್ಕದಲ್ಲಿದ್ದಾರೆ

ಹೈಕಮಾಂಡ್ ನಾಯಕರು ಸಂಪರ್ಕದಲ್ಲಿದ್ದಾರೆ

ಗೋವಾದ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ಪುತ್ರ ಉತ್ಪಾಲ್ ಪರಿಕ್ಕರ್ ಪಣಜಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿದ್ದಾರೆ. ಬಿಜೆಪಿ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದು, ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದಾರೆ.

ಉತ್ಪಲ್ ಪರಿಕ್ಕರ್ ವಿಚಾರದ ಕುರಿತು ಮಾತನಾಡಿ ಪ್ರಮೋದ್ ಸಾವಂತ್, "ಪಕ್ಷದ ಹೈಕಮಾಂಡ್ ನಾಯಕರು ಉತ್ಪಲ್ ಪರಿಕ್ಕರ್ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಈ ವಿಚಾರವನ್ನು ಅವರೇ ಬಗೆಹರಿಸುತ್ತಾರೆ" ಎಂದರು.

ಯಾವ ಪಕ್ಷಕ್ಕೂ ಬಹುಮತವಿಲ್ಲ

ಯಾವ ಪಕ್ಷಕ್ಕೂ ಬಹುಮತವಿಲ್ಲ

ಗೋವಾ ಚುನಾವಣೆ ಕುರಿತು ಚುನಾವಣಾ ಪೂರ್ವ ಸಮೀಕ್ಷೆಗಳು ನಡೆಯುತ್ತಿವೆ. Republic P-MARQ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದ್ದು ಗೋವಾದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆದರೆ ಯಾವುದೇ ಪಕ್ಷಕ್ಕೆ ಬಹುಮತ ಸಿಗುವುದಿಲ್ಲ ಎಂದು ಹೇಳಿದೆ.

40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ 21. ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ 16-20, ಕಾಂಗ್ರೆಸ್ ಮೈತ್ರಿಕೂಟ 9-13 ಸ್ಥಾನಗಳನ್ನು ಪಡೆಯಬಹುದು ಎಂದು ಸಮೀಕ್ಷೆ ವರದಿ ಅಂದಾಜಿಸಿದೆ.

2017ರಲ್ಲಿಯೂ ಬಹುಮತವಿರಲಿಲ್ಲ

2017ರಲ್ಲಿಯೂ ಬಹುಮತವಿರಲಿಲ್ಲ

ಗೋವಾದಲ್ಲಿ ಕಳೆದ ಚುನಾವಣೆಯಲ್ಲಿಯೂ ಯಾವುದೇ ಪಕ್ಷಕ್ಕೆ ಬಹುಮತ ಸಿಕ್ಕಿರಲಿಲ್ಲ. ಬಿಜೆಪಿ 13, ಕಾಂಗ್ರೆಸ್ 17 ಸ್ಥಾನಗಳಲ್ಲಿ ಜಯಗಳಿಸಿದ್ದವು. ಬಿಜೆಪಿ ಗೋವಾ ಫಾರ್ವರ್ಡ್ ಪಕ್ಷ, ಪಕ್ಷೇತರ ಅಭ್ಯರ್ಥಿಗಳ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿತ್ತು. 17 ಸ್ಥಾನಗಳಲ್ಲಿ ಜಯಗಳಿಸಿದ ಕಾಂಗ್ರೆಸ್ ಪ್ರತಿಪಕ್ಷವಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಗೋವಾ ಫಾರ್ವರ್ಡ್ ಪಕ್ಷ ಕಾಂಗ್ರೆಸ್ ಜೊತೆ ಕೈ ಜೋಡಿಸಿದೆ. ಅಲ್ಲದೇ ಈ ಬಾರಿಯ ಚುನಾವಣೆಯಲ್ಲಿ ಎಎಪಿ ಮತ್ತು ಟಿಎಂಸಿ ಸಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+