ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ; ಬಿಜೆಪಿ ಇನ್ನೂ ಸಿಎಂ ಅಭ್ಯರ್ಥಿ ಅಂತಿಮಗೊಳಿಸಿಲ್ಲ!

|
Google Oneindia Kannada News

ಪಣಜಿ, ಮಾರ್ಚ್ 14; ಗೋವಾ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದ್ದು, ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮಾರ್ಚ್ 15ಕ್ಕೆ ಗೋವಾ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಮಾರ್ಚ್ 15ರ ಮಂಗಳವಾರ ಅಧಿವೇಶನ ನಡೆಸಲು ಅಧಿಸೂಚನೆ ಹೊರಡಿಸಿದ್ದಾರೆ. ಗಣೇಶ್ ಗಾಂವ್ಕರ್ ಹಂಗಾಮಿ ಸ್ಪೀಕರ್ ಆಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಮಂಗಳವಾರ ನೂತನ ಶಾಸಕರು ಅವರ ಸಮ್ಮುಖದಲ್ಲಿಯೇ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಗೋವಾ; ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ರಾಜೀನಾಮೆ ಗೋವಾ; ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ರಾಜೀನಾಮೆ

ಗೋವಾ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21 ಸಿಕ್ಕಿಲ್ಲ. ಮೂವರು ಪಕ್ಷೇತರರು, ಎಂಜಿಪಿ ಪಕ್ಷ ಬಿಜೆಪಿಗೆ ಬೆಂಬಲ ನೀಡಿದ್ದು, 25 ಸದಸ್ಯ ಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡುವುದಾಗಿ ಘೋಷಣೆ ಮಾಡಿದೆ.

ಗೋವಾ ಚುನಾವಣೆ; ಉತ್ಪಲ್ ಪರಿಕ್ಕರ್ ಪಡೆದ ಮತಗಳು ಎಷ್ಟು?ಗೋವಾ ಚುನಾವಣೆ; ಉತ್ಪಲ್ ಪರಿಕ್ಕರ್ ಪಡೆದ ಮತಗಳು ಎಷ್ಟು?

ಗೋವಾ ವಿಧಾನಸಭೆಯ ಅವಧಿ ಶನಿವಾರ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜ್ಯಪಾಲರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರು? ಎಂಬ ಗುಟ್ಟನ್ನು ಬಿಜೆಪಿ ಇನ್ನೂ ಬಿಟ್ಟುಕೊಟ್ಟಿಲ್ಲ.

ಗೋವಾ ಅಂತಿಮ ಫಲಿತಾಂಶ; ಬಿಜೆಪಿಗೆ ಪಕ್ಷೇತರರ ಬೆಂಬಲ ಗೋವಾ ಅಂತಿಮ ಫಲಿತಾಂಶ; ಬಿಜೆಪಿಗೆ ಪಕ್ಷೇತರರ ಬೆಂಬಲ

ಬಿಜೆಪಿಗೆ 20 ಸ್ಥಾನಗಳು

ಬಿಜೆಪಿಗೆ 20 ಸ್ಥಾನಗಳು

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಮತದಾನ ನಡೆದಿತ್ತು. ಮಾರ್ಚ್ 10ರಂದು ಮತ ಎಣಿಕೆ ನಡೆದಿದೆ. ಬಿಜೆಪಿ 20, ಕಾಂಗ್ರೆಸ್ 11, ಎಎಪಿ 2, ಎಂಜಿಪಿ 2, ಗೋವಾ ಫಾರ್ವರ್ಡ್ ಪಾರ್ಟಿ 1, ಆರ್‌ಜಿಪಿ 1 ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. ಯಾವ ಪಕ್ಷಕ್ಕೂ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21 ಸಿಕ್ಕಿಲ್ಲ. ಆದರೆ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮೂವರು ಪಕ್ಷೇತರರು, ಎಂಜಿಪಿ ಪಕ್ಷ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದೆ. ಇದರಿಂದಾಗಿ ಬಿಜೆಪಿ ಬಲ 25 ಆಗಿದ್ದು, ಸರ್ಕಾರ ರಚನೆ ಮಾಡುವುದಾಗಿ ಪಕ್ಷ ಹೇಳಿದೆ.

ಕೇಂದ್ರದಿಂದ ವೀಕ್ಷಕರು ಬಂದಿಲ್ಲ

ಕೇಂದ್ರದಿಂದ ವೀಕ್ಷಕರು ಬಂದಿಲ್ಲ

ಮಂಗಳವಾರ 11.30ಕ್ಕೆ ನಡೆಯುವ ವಿಧಾನಸಭೆ ಕಲಾಪದಲ್ಲಿ ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಆದರೆ ಶಾಸಕಾಂಗ ಪಕ್ಷದ ನಾಯಕ ಯಾರು?, ಸಚಿವ ಸಂಪುಟ ಸೇರುವ ಶಾಸಕರು ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ. ಕೇಂದ್ರ ಬಿಜೆಪಿ ಘಟಕ ಶಾಸಕಾಂಗ ಪಕ್ಷದ ಸಭೆ ನಡೆಸಲು ವೀಕ್ಷಕರನ್ನು ಕಳಿಸಿಕೊಡಬೇಕಿದೆ. ಇನ್ನೂ ವೀಕ್ಷಕರು ಬರದ ಕಾರಣದಿಂದಾಗಿ ನೂತನ ಮುಖ್ಯಮಂತ್ರಿ ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

ಪ್ರಮೋದ್ ಸಾವಂತ್ ಮುಂದುವರಿಕೆ

ಪ್ರಮೋದ್ ಸಾವಂತ್ ಮುಂದುವರಿಕೆ

ಶನಿವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪ್ರಮೋದ್ ಸಾವಂತ್ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆದಿದ್ದಾರೆ. ಬಿಜೆಪಿ 2ನೇ ಅವಧಿಗೂ ಪ್ರಮೋದ್ ಸಾವಂತ್ ಅವರನ್ನೇ ಮುಂದುವರೆಸಲಿದೆ ಎಂಬ ಸುದ್ದಿಗಳು ಇವೆ. ಚುನಾವಣಾ ಫಲಿತಾಂಶ ಪ್ರಕಟವಾದ ದಿನದಿಂದ ವಿಶ್ವಜಿತ್ ರಾಣೆ ಹೆಸರು ಸಹ ಸಿಎಂ ಹುದ್ದೆಗೆ ಕೇಳಿ ಬರುತ್ತಿದೆ. ಶನಿವಾರ ಸಂಜೆ ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದು, ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸೋಮವಾರ ಸಂಜೆ ಸಭೆ

ಸೋಮವಾರ ಸಂಜೆ ಸಭೆ

ಗೋವಾ ಚುನಾವಣೆ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ನೂತನ ಶಾಸಕರ ಸಭೆ ನಡೆಸಿದ್ದರು. ಆದರೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆದಿಲ್ಲ. ಸೋಮವಾರ ಕೇಂದ್ರದಿಂದ ವೀಕ್ಷಕರು ಆಗಮಿಸುವ ನಿರೀಕ್ಷೆ ಇದ್ದು, ಸಂಜೆ ನಡೆಯುವ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ, ಸಂಪುಟ ಸೇರುವ ಶಾಸಕರ ಪಟ್ಟಿ ಅಂತಿಮಗೊಳ್ಳುವ ನಿರೀಕ್ಷೆ ಇದೆ.

English summary
BJP central observers are yet to arrive in Goa and a legislature meet is yet to take place to elect chief minister. BJP bagged 20 seats in 40 member Goa assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X