• search
  • Live TV
ಪಣಜಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗೋವಾದ ಬಿಟ್ಸ್ ಪಿಲಾನಿ ಕ್ಯಾಂಪಸ್‌ನ 24 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

|
Google Oneindia Kannada News

ಪಣಜಿ ಏಪ್ರಿಲ್ 1: ಕೊರೊನಾ ಮಹಾಮಾರಿಯ ಮೂರನೇ ಅಲೆಯಿಂದ ಭಾರತ ಚೇತರಿಸಿಕೊಂಡಿದೆ. ಸಾವಿನ ಪ್ರಮಾಣವನ್ನು ನಿಯಂತ್ರಿಸಲು ದೇಶದ ಹೆಚ್ಚಿನ ಜನಸಂಖ್ಯೆಗೆ ಲಸಿಕೆ ಹಾಕಲಾಗಿದೆ. ಈ ಕಾರಣದಿಂದಾಗಿ ಈಗ ಹೆಚ್ಚಿನ ರಾಜ್ಯಗಳು ಕೊರೊನಾ ನಿರ್ಬಂಧಗಳನ್ನು ತೆಗೆದುಹಾಕಿವೆ. ಆದರೆ ಗೋವಾದಿಂದ ಆತಂಕಕಾರಿ ಸುದ್ದಿ ಹೊರಬಿದ್ದಿದೆ. ಗೋವಾದ ಬಿಟ್ಸ್ ಪಿಲಾನಿ ಕ್ಯಾಂಪಸ್‌ನಲ್ಲಿ (BITS Pilani campus) 24 ವಿದ್ಯಾರ್ಥಿಗಳಿಗೆ ಒಟ್ಟಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಈಗ ಸ್ಥಳೀಯ ಆಡಳಿತ ಸಿಬ್ಬಂದಿ ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದ ಜನರನ್ನು ಪತ್ತೆಹಚ್ಚಿ ಪರೀಕ್ಷೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಸಂಸ್ಥೆಯ PRO ಅರ್ಜುನ್ ಹಲರಂಕರ್, 'ದಕ್ಷಿಣ ಗೋವಾದ BITS ಪಿಲಾನಿಯಲ್ಲಿ ಕಳೆದ ಕೆಲವು ದಿನಗಳಲ್ಲಿ 24 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಈ ಕಾರಣದಿಂದಾಗಿ ತರಗತಿಯನ್ನು ಈಗ ಆನ್‌ಲೈನ್ ಮಾಡಲಾಗಿದೆ. ಶುಕ್ರವಾರವೂ ಆರೋಗ್ಯ ಇಲಾಖೆಯ ತಂಡ ಕಾಲೇಜಿಗೆ ಆಗಮಿಸಿ 8 ಮಾದರಿಗಳನ್ನು ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಿದೆ. ಅವರ ವರದಿಗಾಗಿ ಇನ್ನೂ ಕಾಯಲಾಗುತ್ತಿದೆ. ಇದರೊಂದಿಗೆ ಅಲ್ಲಿ ನಡೆಯಲಿರುವ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ' ಎಂದರು.

ಕೋವಿಡ್-19: ಮಾಸ್ಕ್ ಕಡ್ಡಾಯವಲ್ಲದ ರಾಜ್ಯಗಳ ಪಟ್ಟಿ ಇಲ್ಲಿದೆಕೋವಿಡ್-19: ಮಾಸ್ಕ್ ಕಡ್ಡಾಯವಲ್ಲದ ರಾಜ್ಯಗಳ ಪಟ್ಟಿ ಇಲ್ಲಿದೆ

ದಕ್ಷಿಣ ಗೋವಾ ಜಿಲ್ಲೆಯಲ್ಲಿರುವ ಬಿಟ್ಸ್ ಪಿಲಾನಿ ಕ್ಯಾಂಪಸ್ ಸುಮಾರು 2,800 ವಿದ್ಯಾರ್ಥಿಗಳನ್ನು ಹೊಂದಿದೆ. PRO ಪ್ರಕಾರ ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಕ್ಯಾಂಪಸ್‌ಗೆ ಪ್ರವೇಶಿಸುವ ಮೊದಲು ಥರ್ಮಲ್ ಸ್ಕ್ಯಾನ್ ಮಾಡಲಾಗುತ್ತಿದೆ. ಎರಡು-ಮೂರು ದಿನಗಳ ಹಿಂದೆ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಡಲು ಪ್ರಾರಂಭವಾಗಿದೆ. ಸೋಂಕಿತರ ಸಂಖ್ಯೆ ಈಗ 24ಕ್ಕೆ ತಲುಪಿದೆ. ಆದಾಗ್ಯೂ ಕ್ಯಾಂಪಸ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಹೆಚ್ಚಿಲ್ಲ ಎಂದಿದ್ದಾರೆ.

ದೇಶದ ಪರಿಸ್ಥಿತಿ ಹೇಗಿದೆ?

ಶುಕ್ರವಾರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1335 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 52 ಜನರು ಸಾವನ್ನಪ್ಪಿದ್ದಾರೆ. ಅದೇ ಅವಧಿಯಲ್ಲಿ1918 ರೋಗಿಗಳು ಕೊರೊನಾದಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 4,30,25,775 ಕ್ಕೆ ಏರಿಕೆಯಾಗಿದ್ದು. ಅದರಲ್ಲಿ 13,672 ಸಕ್ರಿಯ ಪ್ರಕರಣಗಳಿವೆ.

Corona positive for 24 students of Goa Bits Pilani campus

ಈ ರಾಜ್ಯಗಳಲ್ಲಿ ಮಾಸ್ಕ್ ರದ್ದು

ಇದರ ನಡುವೆ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕ್ರಮೇಣ ಇಳಿಕೆಯಾಗಿದ್ದು ಕೆಲ ರಾಜ್ಯಗಳು ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸಲು ನಿರ್ಧರಿಸಿವೆ. ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಇಳಿಕೆಯಾದ ಬೆನ್ನಲ್ಲೇ ಮಹಾರಾಷ್ಟ್ರ, ದೆಹಲಿ, ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿ ಕೊರೊನಾ ಮಾನದಂಡಗಳನ್ನು ಸಂಪೂರ್ಣ ಸಡಿಲಗೊಳಿಸುವುದಾಗಿ ಆಯಾ ರಾಜ್ಯಗಳ ಸರ್ಕಾರ ಘೋಷಿಸಿವೆ. ಚೀನಾದಲ್ಲಿ ಹೊಸ ವೈರಸ್ ಉಲ್ಬಣವಾಗಿರುವುದು ಕಂಡುಬಂದರೂ ಸಹ ದೇಶದ ಅನೇಕ ರಾಜ್ಯಗಳು ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸಿವೆ. ಈ ರಾಜ್ಯಗಳಲ್ಲಿ ಎಲ್ಲಾ ಸಾಂಕ್ರಾಮಿಕ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳಲಾಗಿದೆ. ಕೊರೊನಾ ಆರಂಭದಲ್ಲಿ ದೇಶದಲ್ಲೇ ಅತೀ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ ಮಹಾರಾಷ್ಟ್ರದಲ್ಲೂ ಮಾಸ್ಕ್ ಕಡ್ಡಾಯ ಸಡಿಲಗೊಳಿಸಲಾಗಿದೆ. ಇನ್ಮುಂದೆ ಮಹಾರಾಷ್ಟ್ರದಲ್ಲಿ ಮಾಸ್ಕ್‌ ಕಡ್ಡಾಯವಲ್ಲ. ಜೊತೆಗೆ ಮಾಸ್ಕ್‌ ಹಾಕದವರಿಗೆ ದಂಡವನ್ನೂ ವಿಧಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

English summary
The South Goa District Administration has ordered COVID-19 testing of all the students and teachers after 24 cases of viral infection came to light on BITS Pilani campus near Vasco town on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X