ಕೊವಿಡ್ 19: ಆಯುಷ್ ಸಚಿವ ಶ್ರೀಪಾದ್ ನಾಯಕ್ ಸ್ಥಿತಿ ಗಂಭೀರ

ಪಣಜಿ, ಆಗಸ್ಟ್ 24: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕೇಂದ್ರದ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರ ಸ್ಥಿತಿ ಚಿಂತಾಜನಕವಾಗಿದೆ.

Recommended Video

      ತಮ್ಮನ ಅರ್ಹತೆ ಬಗ್ಗೆ ಮಾತನಾಡಿದ Priyanka Vadra... | Oneindia Kannada

      ಆಗಸ್ಟ್​ 12ರಂದು ಶ್ರೀಪಾದ್​ ನಾಯ್ಕ್​ ಅವರು ಗೋವಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನದಿಂದ ಅವರ ಆರೋಗ್ಯದಲ್ಲಿ ಏರಿಳಿತವುಂಟಾಗಿದೆ.

      ಕೊವಿಡ್​-19 ರೋಗಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಆಯುಷ್​ ಇಲಾಖೆ ಸಚಿವ ಶ್ರೀಪಾದ್​ ನಾಯ್ಕ್​ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ತಿಳಿಸಿದ್ದಾರೆ.

      Covid 19: Drop In AYUSH Minister Shripad naik Oxygen Saturation

      ದೆಹಲಿಯಿಂದ ಆಗಮಿಸಿರುವ ವೈದ್ಯರ ತಂಡ ಸೂಚಿಸಿದರೆ ನಾಯ್ಕ್​ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಆಸ್ಪತ್ರೆಗೇ ಸ್ಥಳಾಂತರ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

      ಶ್ರೀಪಾದ್​ ನಾಯ್ಕ್​ ಅವರ ರಕ್ತದಲ್ಲಿ ಆಮ್ಲಜನಕ ಶುದ್ಧತ್ವ ಮಟ್ಟ ಇಂದು ಕುಸಿದಿದೆ. ಇಂದು ಸಂಜೆ ದೆಹಲಿಯ ಏಮ್ಸ್​ ಮತ್ತು ಕಮಾಂಡ್​ ಆಸ್ಪತ್ರೆಯ ತಜ್ಞ ವೈದ್ಯರು ಗೋವಾಕ್ಕೆ ತೆರಳಿದ್ದು, ಸಚಿವರ ಆರೋಗ್ಯದ ಸಂಪೂರ್ಣ ವರದಿ ಪಡೆಯಲಿದ್ದಾರೆ. ಹಾಗೇ ಚಿಕಿತ್ಸೆ ನೀಡಲಿದ್ದಾರೆ ಎಂದೂ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+