ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಮೀಕ್ಷೆ; ಗೋವಾ ಚುನಾವಣೆಯಲ್ಲಿ ಎಎಪಿಗೆ ಪ್ರತಿಪಕ್ಷ ಸ್ಥಾನ!

|
Google Oneindia Kannada News

ಪಣಜಿ, ಜನವರಿ 04; ಗೋವಾ ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಈಗ ಬಿಜೆಪಿ ಅಧಿಕಾರದಲ್ಲಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಎಎಪಿಗೆ ಹೆಚ್ಚು ಸ್ಥಾನಗಳು ಸಿಗಲಿವೆ ಎಂದು ಹೇಳಿವೆ.

2022ರ ಗೋವಾ ವಿಧಾನಸಭೆ ಚುನಾವಣೆ ಕುರಿತು Times Now Navbharat by VETO ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದೆ. ರಾಜ್ಯದಲ್ಲಿ ಕಾಂಗ್ರೆಸ್‌ಗಿಂತ ಹೆಚ್ಚಿನ ಸ್ಥಾನಗಳು ಆಮ್ ಆದ್ಮಿ ಪಕ್ಷಕ್ಕೆ ಸಿಗಲಿವೆ ಎಂದು ವರದಿ ತಿಳಿಸಿದೆ.

ಕೋವಿಡ್; ಗೋವಾ ವಿಧಾನಸಭೆ ಚುನಾವಣೆ ಮುಂದೂಡಿಕೆ ಇಲ್ಲ ಕೋವಿಡ್; ಗೋವಾ ವಿಧಾನಸಭೆ ಚುನಾವಣೆ ಮುಂದೂಡಿಕೆ ಇಲ್ಲ

ದೆಹಲಿಯಲ್ಲಿರುವ ಆಮ್ ಆದ್ಮಿ ಪಕ್ಷ ಪಂಜಾಬ್, ಉತ್ತರಾಖಂಡ, ಗೋವಾ ಚುನಾವಣೆ ಬಗ್ಗೆ ಹೆಚ್ಚಿನ ಗಮನ ಹರಿಸಿದೆ. ಫೆಬ್ರವರಿ ಅಂತ್ಯ ಅಥವ ಮಾರ್ಚ್ ತಿಂಗಳಿನಲ್ಲಿ ಗೋವಾ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 21.

ಗೋವಾ ಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಗೋವಾ ಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ

2022ರ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಎಎಪಿ 53-57, ಉತ್ತರಾಖಂಡದಲ್ಲಿ 4-7, ಗೋವಾದಲ್ಲಿ7-11 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ವರದಿ ಹೇಳಿದೆ. ಗೋವಾದಲ್ಲಿ ಈಗಾಗಲೇ ಎಎಪಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ.

ಗೋವಾ ಮಾಜಿ ಸಚಿವ ಬಿಜೆಪಿಗೆ ಸೇರ್ಪಡೆಗೆ ಸಜ್ಜು ಗೋವಾ ಮಾಜಿ ಸಚಿವ ಬಿಜೆಪಿಗೆ ಸೇರ್ಪಡೆಗೆ ಸಜ್ಜು

ಗೋವಾದಲ್ಲಿ ಯಾರಿಗೆ ಎಷ್ಟು ಸೀಟು?

ಗೋವಾದಲ್ಲಿ ಯಾರಿಗೆ ಎಷ್ಟು ಸೀಟು?

Times Now Navbharat by VETO ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ ಗೋವಾದಲ್ಲಿ 2022ರ ಚುನಾವಣೆಯಲ್ಲಿ ಬಿಜೆಪಿ 18-22, ಎಎಪಿ 7-11, ಕಾಂಗ್ರೆಸ್ 4-6, ಇತರರು 3-5 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಹೇಳಿದೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಎಎಪಿ 2ನೇ ಅತಿ ದೊಡ್ಡ ಪಕ್ಷವಾಗಿ ಪ್ರತಿಪಕ್ಷ ಸ್ಥಾನವನ್ನು ಅಲಂಕರಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ.

ಎಎಪಿಗೆ ಲಾಭವೇ ಆಗಲಿದೆ

ಎಎಪಿಗೆ ಲಾಭವೇ ಆಗಲಿದೆ

40 ಸದಸ್ಯ ಬಲದ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಎಎಪಿ 7-11 ಸ್ಥಾನಗಳನ್ನು ಗೆದ್ದರೆ ಪಕ್ಷಕ್ಕೆ ಲಾಭವೇ ಆಗಲಿದೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಪಕ್ಷ ಯಾವುದೇ ಸ್ಥಾನಗಳಲ್ಲಿ ಜಯಗಳಿಸಿರಲಿಲ್ಲ. ಪ್ರತಿಪಕ್ಷದ ಸ್ಥಾನ ಪಡೆದರೆ ರಾಜ್ಯದ ಜನರು ಬದಲಾವಣೆ ಬಯಸಿದ್ದಾರೆ ಎಂಬುದು ಬಹಿರಂಗವಾಗಲಿದೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಪಕ್ಷ ಮತ್ತೊಂದು ರಾಜ್ಯದಲ್ಲಿ ಪ್ರತಿಪಕ್ಷದ ಸ್ಥಾನದಲ್ಲಿ ಕೂರಲಿದೆ.

ಕಾಂಗ್ರೆಸ್ ಪಕ್ಷಕ್ಕೆ ನಷ್ಟ

ಕಾಂಗ್ರೆಸ್ ಪಕ್ಷಕ್ಕೆ ನಷ್ಟ

ವಿಧಾನಸಭೆ ಚುನಾವಣೆ ಎದುರಾಗಿರುವಾಗಲೇ ಹಲವಾರು ನಾಯಕರ ರಾಜೀನಾಮೆಯಿಂದಾಗಿ ಗೋವಾ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿದೆ. ಕಳೆದ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಕಾಂಗ್ರೆಸ್ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ವಿಫಲವಾಗಿತ್ತು. ಈ ಬಾರಿಯ ಚುನಾವಣೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರಾಜ್ಯದಲ್ಲಿ ಈಗಾಗಲೇ ಪ್ರಚಾರರಕ್ಕೆ ಚಾಲನೆ ನೀಡಿದ್ದಾರೆ.

ಬಿಜೆಪಿಗೆ ಮತ್ತೆ ಅಧಿಕಾರ

ಬಿಜೆಪಿಗೆ ಮತ್ತೆ ಅಧಿಕಾರ

ಗೋವಾದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆ ಹೇಳಿದೆ. 2017ರ ಚುನಾವಣೆಯಲ್ಲಿ ಬಿಜೆಪಿ 13 ಸ್ಥಾನದಲ್ಲಿ ಮಾತ್ರ ಜಯಗಳಿಸಿತ್ತು. ಆದರೆ 17 ಸ್ಥಾನಗಳಿಸಿದ್ದ ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ವಿಫಲವಾಗಿತ್ತು. ಇತರ ಪಕ್ಷಗಳ ಜೊತೆ ಮೈತ್ರಿಮಾಡಿಕೊಂಡು ಬಿಜೆಪಿ ಅಧಿಕಾರ ಹಿಡಿದಿತ್ತು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 18-22 ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ.

English summary
Goa assembly election 2022; Pre-poll survey by Times Now Navbharat by VETO said that Aam Aadmi Party may emerge as opposition party in Goa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X