ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ: ಚುನಾವಣೆಗೂ ಮುನ್ನ ಬಿಜೆಪಿ ತ್ಯಜಿಸಲು ಮುಂದಾದ ಮಾಜಿ ಸಿಎಂ

|
Google Oneindia Kannada News

ಪಣಜಿ, ಜನವರಿ 22: ಗೋವಾ ವಿಧಾನಸಭೆಗೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು, ಈಗ ಅವರು ಪಕ್ಷ ತೊರೆಯುವುದಾಗಿ ಹೇಳೀದ್ದಾರೆ.

ಗೋವಾದಲ್ಲಿ ಮಾಜಿ ಸಿಎಂ ಮನೋಹರ್ ಪರಿಕ್ಕರ್ ನಂತರ ಅವರ ಉತ್ತರಾಧಿಕಾರಿಯಾಗಿದ್ದ ಲಕ್ಷ್ಮೀಕಾಂತ್ ಪರ್ಸೇಕರ್ ಶನಿವಾರ ಬಿಜೆಪಿ ತ್ಯಜಿಸಲಿದ್ದಾರೆ. ಇದು ಗೋವಾ ಚುನಾವಣೆಗೂ ಮುನ್ನ ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ. ಶುಕ್ರವಾರವಷ್ಟೇ ದಿ.ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಪಕ್ಷ ತೊರೆದಿದ್ದರು.

ಫೆಬ್ರವರಿ ತಿಂಗಳು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆ ಗೋವಾ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಆಡಳಿತರೂಢ ಪಕ್ಷಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

Goa Assembly Election: Former CM Laxmikant Parsekar Likely to Quit BJP Taday

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ 65 ವರ್ಷದ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್, ಬಿಜೆಪಿ ಪಕ್ಷದಲ್ಲಿ ಉಳಿಯಲು ಬಯಸುವುದಿಲ್ಲ ಮತ್ತು ಶನಿವಾರ ಸಂಜೆಯೊಳಗೆ ಔಪಚಾರಿಕವಾಗಿ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದರು.

ಲಕ್ಷ್ಮೀಕಾಂತ್ ಪರ್ಸೇಕರ್ ಪ್ರಸ್ತುತ ಮುಂಬರುವ ಗೋವಾ ವಿಧಾನಸಭಾ ಚುನಾವಣೆಗಳಿಗಾಗಿ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿದ್ದಾರೆ ಮತ್ತು ಪಕ್ಷದ ಕೋರ್ ಕಮಿಟಿಯ ಸದಸ್ಯರೂ ಆಗಿದ್ದಾರೆ.

2002 ಮತ್ತು 2017ರ ನಡುವೆ ಲಕ್ಷ್ಮೀಕಾಂತ್ ಪರ್ಸೇಕರ್ ಪ್ರತಿನಿಧಿಸಿದ್ದ ಮಾಂಡ್ರೆಮ್ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ದಯಾನಂದ್ ಸೋಪ್ಟೆ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ದಯಾನಂದ್ ಸೋಪ್ಟೆ 2017ರ ಗೋವಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮೀಕಾಂತ್ ಪರ್ಸೇಕರ್ನ್ನು ಸೋಲಿಸಿದ್ದರು. ರಾಜಕೀಯ ಬದಲಾವಣೆ ನಂತರ 2019 ರಲ್ಲಿ ಒಂಭತ್ತು ಇತರ ಶಾಸಕರೊಂದಿಗೆ ಆಡಳಿತಾರೂಢ ಬಿಜೆಪಿಯನ್ನು ಸೇರಿದ್ದರು.

"ಸದ್ಯ ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನಾನು ಮುಂದೆ ಏನು ಮಾಡಬೇಕು ಎಂಬುದನ್ನು ನಂತರ ನಿರ್ಧರಿಸಲಾಗುವುದು," ಎಂದು ಲಕ್ಷ್ಮೀಕಾಂತ್ ಪರ್ಸೇಕರ್ ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿದರು.

ದಯಾನಂದ್ ಸೋಪ್ಟೆ ಅವರು ಮಾಂಡ್ರೆಮ್‌ನಲ್ಲಿ ಮೂಲ ಬಿಜೆಪಿ ಕಾರ್ಯಕರ್ತರನ್ನು ನಿರ್ಲಕ್ಷಿಸುತ್ತಿದ್ದಾರೆ, ಇದರಿಂದಾಗಿ ನನಗೆ ದೊಡ್ಡ ಪ್ರಮಾಣದ ಅಸಮಾಧಾನವಿದೆ ಎಂದು ಲಕ್ಷ್ಮೀಕಾಂತ್ ಪರ್ಸೇಕರ್ ಹೇಳಿದರು.

ಲಕ್ಷ್ಮೀಕಾಂತ್ ಪರ್ಸೇಕರ್ ಅವರು 2014ರಿಂದ 2017ರ ನಡುವೆ ಗೋವಾದ ಮುಖ್ಯಮಂತ್ರಿಯಾಗಿದ್ದರು. ಆಗಿನ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ರಕ್ಷಣಾ ಸಚಿವರಾಗಿ ಕೇಂದ್ರ ಸಂಪುಟಕ್ಕೆ ಸೇರ್ಪಡೆಗೊಂಡ ನಂತರ ಪರ್ಸೇಕರ್ ಗೋವಾದ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಫೆಬ್ರವರಿ 14 ರಂದು ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ ಬಿಜೆಪಿ 34 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ತಂದೆ ಮನೋಹರ್ ಪರಕ್ಕರ್ ಪ್ರತಿನಿಧಿಸುತ್ತಿದ್ದ ಪಣಜಿ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಬಿಜೆಪಿ ತೊರೆದಿದ್ದಾರೆ.

ಫೆಬ್ರವರಿ 14ರಂದು ಮತದಾನ
40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಜನವರಿ 21ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಮಾಡಲು ಜನವರಿ 28 ಕೊನೆಯ ದಿನವಾಗಿದೆ. ಜನವರಿ 31 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಗೊಳ್ಳಲಿದೆ.

English summary
Goa's former Chief Minister Laxmikant Parsekar was denied ticket by the party for the next month's state Assembly elections, today said he will resign to BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X