ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ ಚುನಾವಣೆ: 38 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಿಜೆಪಿ ನಿರ್ಧಾರ

|
Google Oneindia Kannada News

ಪಣಜಿ, ಜನವರಿ 14: ಪ್ರಸ್ತುತ ಗೋವಾದಲ್ಲಿ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದ ಒಟ್ಟು 40 ವಿಧಾನಸಭಾ ಕ್ಷೇತ್ರಗಳಲ್ಲಿ 38 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಪಕ್ಷದ ಹಿರಿಯ ಪದಾಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಗೋವಾದಲ್ಲಿ ಫೆಬ್ರವರಿ ತಿಂಗಳು ವಿಧಾನಸಭಾ ಚುನಾವಣೆ ನಡೆಯಲಿದೆ.

ಈ ಕುರಿತು ಪಿಟಿಐ ಜೊತೆ ಮಾತನಾಡಿದ ಗೋವಾ ಬಿಜೆಪಿ ಪದಾಧಿಕಾರಿಯೊಬ್ಬರು, ಬೆನೌಲಿಮ್ ಮತ್ತು ನುವೆಮ್ ಎಂಬ ಎರಡು ಕ್ಷೇತ್ರಗಳಲ್ಲಿ ಪಕ್ಷವು ತನ್ನ ಚಿಹ್ನೆಯ ಮೇಲೆ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಸಾಂಪ್ರದಾಯಿಕವಾಗಿ, ಬೆನೌಲಿಮ್ ಮತ್ತು ನುವೆಮ್ ಕ್ಷೇತ್ರಗಳಲ್ಲಿ ಜನರು ಬಿಜೆಪಿಯೇತರ ಅಭ್ಯರ್ಥಿಗಳಿಗೆ ಮತ ಹಾಕುತ್ತಾರೆ. ಇವೆರಡೂ ಕ್ರಿಶ್ಚಿಯನ್ ಪ್ರಾಬಲ್ಯದ ಕ್ಷೇತ್ರಗಳಾಗಿವೆ.

Goa Assembly Elections 2022: BJP To Contest 38 Out Of 40 Seats

ಪ್ರಸ್ತುತ, ಬೆನೌಲಿಮ್ ಅನ್ನು ಚರ್ಚಿಲ್ ಅಲೆಮಾವೊ ಪ್ರತಿನಿಧಿಸುತ್ತಿದ್ದಾರೆ, ಅವರು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಟಿಕೆಟ್‌ನಲ್ಲಿ ಆಯ್ಕೆಯಾದ ನಂತರ, ಕಳೆದ ತಿಂಗಳು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಸೇರ್ಪಡೆಯಾಗಿದ್ದಾರೆ. ಆದರೆ ನುವೆಮ್ ಕ್ಷೇತ್ರವನ್ನು ವಿಲ್ಫ್ರೆಡ್ ಡಿಸಾ ಪ್ರತಿನಿಧಿಸುತ್ತಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದಿದ್ದರು, ಆದರೆ ರಾಜಕೀಯ ಬದಲಾವಣೆಯಲ್ಲಿ ನಂತರ ಆಡಳಿತಾರೂಢ ಬಿಜೆಪಿ ಸೇರಿದ್ದರು.

ಬಿಜೆಪಿ ಪಕ್ಷದ ಸಂಸದೀಯ ಮಂಡಳಿಯು ಅಭ್ಯರ್ಥಿಗಳ ಪಟ್ಟಿಯನ್ನು ಅನುಮೋದಿಸಿದ ನಂತರ ಜನವರಿ 16ರ ನಂತರ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಔಪಚಾರಿಕ ಘೋಷಣೆ ಮಾಡಲಾಗುವುದು ಎಂದು ಅವರು ಹೇಳಿದರು.

ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ತನ್ನ ಕೋರ್ ಕಮಿಟಿಯ ಸಭೆಗಳನ್ನು ನಡೆಸುತ್ತಿದ್ದು, ಗೋವಾ ವಿಧಾನಸಭೆ ಚುನಾವಣೆಗೆ ಪಕ್ಷದ ಉಸ್ತುವಾರಿಯಾಗಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡನವೀಸ್, ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸದಾನಂದ ಶೇಟ್ ತಾನವಡೆ, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೇರಿದಂತೆ ಇತರರು ಸಭೆಗಳನ್ನು ನಿರಂತರ ನಡೆಸುತ್ತಿದ್ದಾರೆ.

Goa Assembly Elections 2022: BJP To Contest 38 Out Of 40 Seats

ಗೋವಾ ಬಿಜೆಪಿ ಪದಾಧಿಕಾರಿಗಳು ಜನವರಿ 15ರಂದು ದೆಹಲಿಗೆ ಭೇಟಿ ನೀಡಿ ವರಿಷ್ಠರೊಂದಿಗೆ ಸಭೆ ನಡೆಸಲಿದ್ದು, ಪಕ್ಷದ ಸಂಸದೀಯ ಮಂಡಳಿಯು ಮರುದಿನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದೆ ಎಂದು ಗುರುವಾರ ಸಿಎಂ ಪ್ರಮೋದ್ ಸಾವಂತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾಲ್ವರು ಶಾಸಕರಾದ ಮೈಕೆಲ್ ಲೋಬೋ, ಅಲೀನಾ ಸಲ್ಡಾನ್ಹಾ, ಕಾರ್ಲೋಸ್ ಅಲ್ಮೇಡಾ ಮತ್ತು ಪ್ರವೀಣ್ ಝಾಂಟ್ಯೆ ಅವರು ಬಿಜೆಪಿ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಬಿಜೆಪಿಯು ಪ್ರಸ್ತುತ ಗೋವಾದಲ್ಲಿ 23 ಶಾಸಕರೊಂದಿಗೆ ಆಡಳಿತ ನಡೆಸುತ್ತಿದೆ.

ಫೆಬ್ರವರಿ 14ರಂದು ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿ, ಟಿಎಂಸಿ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ (ಎಎಪಿ) ಸೇರಿದಂತೆ ಹಲವಾರು ಪಕ್ಷಗಳು ಸ್ಪರ್ಧಿಸಲಿವೆ.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಜನವರಿ 21ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಮಾಡಲು ಜನವರಿ 28 ಕೊನೆಯ ದಿನವಾಗಿದೆ. ಜನವರಿ 31 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಗೊಳ್ಳಲಿದೆ.

English summary
Goa Assembly Elections 2022: BJP has decided to contest 38 out of the total 40 Assembly seats in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X