Breaking; ಗೋವಾ ಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ

ಪಣಜಿ, ಡಿಸೆಂಬರ್ 16; ಗೋವಾ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 2022ರ ಫೆಬ್ರವರಿ ಅಥವ ಮಾರ್ಚ್ ತಿಂಗಳಿನಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.

ಗುರುವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಗೋವಾದಲ್ಲಿ ಒಟ್ಟು 40 ವಿಧಾನಸಭಾ ಕ್ಷೇತ್ರಗಳಿವೆ. 8 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಮಾರ್ಗೋ, ಪೊಂಡಾ, ಮರ್ಮ ಗೋವಾ ಸೇರಿದಂತೆ 8 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

Goa Assembly Elections 2022 Congress First List Of Candidates

ಕಳೆದ ಶುಕ್ರವಾರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗೋವಾಕ್ಕೆ ಭೇಟಿ ನೀಡಿದ್ದರು. ಅವರ ಭೇಟಿ ದಿನವೇ ಕಾಂಗ್ರೆಸ್ ನಾಯಕರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದರು.

ವಿವಿಧ ಕಡೆ ಪ್ರಚಾರ ನಡೆಸಿದ್ದ ಅವರು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ಜೊತೆ ಸಂವಾದ ನಡೆಸಿದ್ದರು. ಮುಂದಿನ ಚುನಾವಣೆಯಲ್ಲಿ ಸಮಾನ ಮನಸ್ಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಸಿದ್ಧತೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಇದರಿಂದ ಹಿನ್ನಡೆ ಉಂಟಾಗಿತ್ತು.

ಶೇ 30ರಷ್ಟು ಮೀಸಲಾತಿ; ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 30ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಣೆ ಮಾಡಿದ್ದರು.

ಗೋವಾ ವಿಧಾನಸಭೆ ಚುನಾವಣೆಗೆ ಯಾವುದೇ ಪಕ್ಷ ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಆದರೆ ಕಾಂಗ್ರೆಸ್ ಎಲ್ಲಾ ಪಕ್ಷಗಳಿಗಿಂತ ಮೊದಲು ಅಭ್ಯರ್ಥಿ ಘೋಷಣೆ ಮಾಡುವ ಮೂಲಕ ಚುನಾವಣೆ ಕೆಲಸಗಳನ್ನು ಆರಂಭಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+