ಗೋವಾ ಚುನಾವಣೆ; ಹಲವು ಪದಾಧಿಕಾರಿಗಳನ್ನು ನೇಮಿಸಿದ ಕಾಂಗ್ರೆಸ್
ಪಣಜಿ, ಡಿಸೆಂಬರ್ 05; ಮುಂಬರುವ ಗೋವಾ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಟು ಪಕ್ಷ ಸಂಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಹಲವಾರು ಬದಲಾವಣೆ ಮಾಡಿದೆ. 2022ರ ಫೆಬ್ರವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಹಿರಿಯ ಉಪಾಧ್ಯಕ್ಷ, 10 ಉಪಾಧ್ಯಕ್ಷರು ಮತ್ತು 19 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಎಂ. ಕೆ. ಶೈಖ್ ನೂತನ ಹಿರಿಯ ಉಪಾಧ್ಯರಾಗಿದ್ದಾರೆ. ಮೂವರು ವಕ್ತಾರರನ್ನು ಸಹ ನೇಮಿಸಲಾಗಿದೆ.
ರಾಜ್ಯದ ಕಾಂಗ್ರೆಸ್ ಘಟಕವನ್ನು ಅಧ್ಯಕ್ಷ ಗಿರೀಶ್ ಚೋಡಾನಕರ್ ಅವರೇ ಮುನ್ನಡೆಸಲಿದ್ದಾರೆ. ಉಳಿದಂತೆ 34 ಕಾರ್ಯದರ್ಶಿಗಳು, 21 ಕಾರ್ಯಕಾರಿ ಸಮಿತಿ ಸದಸ್ಯರು, 19 ವಿಶೇಷ ಆಹ್ವಾನಿತರನ್ನು ನೇಮಕ ಮಾಡಲಾಗಿದೆ.

ಸ್ಕ್ರೀನಿಂಗ್ ಕಮಿಟಿ; ಗೋವಾ ವಿಧಾನಸಭೆಗೆ ಈಗಾಗಲೇ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ನೇಮಕ ಮಾಡಿದೆ. ರಜನಿ ಪಾಟೀಲ್ ಕಮಿಟಿ ಅಧ್ಯಕ್ಷರಾಗಿದ್ದು, ಹೈಬಿ ಈಡನ್ ಮತ್ತು ಧ್ರುವ ನಾರಾಯಣ್ ಸದಸ್ಯರಾಗಿದ್ದಾರೆ.
ಪದನಿಮಿತ್ತ ಸದಸ್ಯರಾಗಿ ಎಐಸಿಸಿ ಉಸ್ತುವಾರಿ ದಿನೇಶ್ ಗುಂಡೂರಾವ್, ಪಿಸಿಸಿ ಅಧ್ಯಕ್ಷ ಗಿರೀಶ್ ಚೋಡಂಕರ್ ಮತ್ತು ಪ್ರತಿಪಕ್ಷ ನಾಯಕ ದಿಗಂಬರ್ ಕಾಮತ್ ಇದ್ದಾರೆ. ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಸ್ಕ್ರೀನಿಂಗ್ ಕಮಿಟಿ ಪ್ರಮುಖ ಪಾತ್ರವಹಿಸುತ್ತದೆ.
ಪ್ರಚಾರ ಆರಂಭ; ಗೋವಾ ವಿಧಾನಸಭೆ ಚುನಾವಣೆಗೆ ವಿವಿಧ ಪಕ್ಷಗಳು ತಯಾರಿ ಆರಂಭಿಸಿವೆ. ಚುನಾವಣೆ ದಿನಾಂಕ ಘೋಷಣೆಯಾಗಿಲ್ಲ ಆದರೆ ಚುನಾವಣಾ ಪ್ರಚಾರ ಕಾರ್ಯ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗಾಗಲೇ ರಾಜ್ಯದಲ್ಲಿ ಸಂಚಾರ ನಡೆಸಿ ಪ್ರಚಾರ ಆರಂಭಿಸಿದ್ದಾರೆ.
ಬಿರುಸಿನಿಂದ ಪ್ರಚಾರವನ್ನು ಆರಂಭಿಸುವಂತೆ ರಾಜ್ಯದ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಸೂಚನೆ ಕೊಟ್ಟಿದ್ದಾರೆ. ಕಾಂಗ್ರೆಸ್‌ನ ಹಿತೈಷಿಗಳು, ಬೆಂಬಲಿಗರ ಜೊತೆ ಸಭೆಗಳನ್ನು ಮಾಡುವಂತೆ ನಿರ್ದೇಶನಗಳನ್ನು ನೀಡಲಾಗಿದೆ.
2017ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸದಸ್ಯ ಬಲದ ವಿಧಾನಸಭೆಯಲ್ಲಿ 17 ಸ್ಥಾನಗಳಲ್ಲಿ ಜಯಗಳಿಸಿತ್ತು. ಬಿಜೆಪಿ 13 ಸ್ಥಾನದಲ್ಲಿ ಮಾತ್ರ ಗೆದ್ದಿತ್ತು. ಆದರೆ ಮೈತ್ರಿ ಮಾಡಿಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಿತ್ತು.
ಈ ಬಾರಿ ನಡೆಯುವ ವಿಧಾನಸಭೆ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ, ಕಾಂಗ್ರೆಸ್, ಗೋವಾದ ಸ್ಥಳೀಯ ಪಕ್ಷಗಳ ಜೊತೆಗೆ ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚನೆ ಮಾಡಿರುವ ಟಿಎಂಸಿ ಗೋವಾದಲ್ಲಿ 40 ಸ್ಥಾನಗಳಲ್ಲಿ ಕಣಕ್ಕಿಳಿಯಲು ತೀರ್ಮಾನಿಸಿದೆ. ಎಎಪಿ ಸಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
ಅರವಿಂದ ಕೇಜ್ರಿವಾಲ್ ಭೇಟಿ; ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಶನಿವಾರ ಗೋವಾಕ್ಕೆ ಭೇಟಿ ನೀಡಿದ್ದರು. "ದೈವಿಕ ಶಕ್ತಿಗಳು ಒಂದಾಗುತ್ತಿವೆ. ಹೀಗಾಗಿ ಈ ಬಾರಿ ಏನೋ ಆಗಲಿದೆ" ಎಂದು ವಿಧಾನಸಭೆ ಚುನಾವಣೆ ಕುರಿತು ಅವರು ಮಾತನಾಡಿದರು.
ಗೋವಾ ಚುನಾವಣೆಯಲ್ಲಿ ಗೋವಾ ಫಾರ್ವರ್ಡ್ ಪಾರ್ಟಿ ಕಾಂಗ್ರೆಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲಿದೆ. ಪಕ್ಷದ ಪ್ರಮುಖರಾದ ವಿಜಯ್ ಸರ್ದೇಸಾಯಿ ಈ ಕುರಿತು ಘೋಷಣೆ ಮಾಡಿದ್ದಾರೆ. ಅದಕ್ಕೂ ಮೊದಲು ಅವರು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿದ್ದರು.
"ನನ್ನ ಸಹೋದ್ಯೋಗಿಗಳಾದ ಪ್ರಸಾದ್ ಗಾಂವ್ಕರ್ ಮತ್ತು ವಿನೋದ್ ಪಾಲ್ಯೇಕರ್ ಅವರ ಜೊತೆ ರಾಹುಲ್ ಗಾಂಧಿ ಭೇಟಿ ಮಾಡಿದೆ. ಬಿಜೆಪಿಯ ಸಂಪೂರ್ಣ ಭ್ರಷ್ಟ, ಅಸಮರ್ಥ, ಪ್ರಜಾಸತ್ಮಕವಲ್ಲದ ಆಡಳಿತಕೊನೆಗೊಳಿಸಲು ಪೂರ್ಣ ಹೃದಯದಿಂದ ಹೋರಾಡಲು ನಾವು ಒಪ್ಪಿಕೊಂಡಿದ್ದೇವೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
ಗೋವಾ ಫಾರ್ವರ್ಡ್ ಪಾರ್ಟಿ ಕಳೆದ ತಿಂಗಳು ಟಿಎಂಸಿ ಜೊತೆ ಮೈತ್ರಿಗೆ ಮುಂದಾಗಿತ್ತು. ವಿಜಯ್ ಸರ್ದೇಸಾಯಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಭೇಟಿಯಾಗಿದ್ದರು. ಆದರೆ ಈಗ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಎರಡು ಪಕ್ಷಗಳ ನಡುವೆ ಸೀಟು ಹಂಚಿಕೆ ವಿಚಾರ ಇನ್ನೂ ಅಂತಿಮಗೊಂಡಿಲ್ಲ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications